ಹಾವೇರಿ: ತಹಶೀಲ್ದಾರ್ ಗಿರೀಶ್ ಸ್ವಾದಿ ನಾಪತ್ತೆ; ದೂರು ದಾಖಲು

ಹಾವೇರಿ: (haveri) ಇಲ್ಲಿನ ತಹಶೀಲ್ದಾರ್ ಗಿರೀಶ ಸ್ವಾದಿ ಅವರು ಮೂರು ದಿನಗಳಿಂದ ನಾಪತ್ತೆಯಾದ್ದು, ಈ ಬಗ್ಗೆ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅ.31ರಂದು ರಾತ್ರಿ 9.30ಕ್ಕೆ ಪರಿಚಿತರ ಮೊಬೈಲ್ ಫೋನ್ ನಿಂದ ಕರೆ ಮಾಡಿದ್ದ ತಹಶೀಲ್ದಾರ್ ಗಿರೀಶ್ ಸ್ವಾದಿ ಅವರು, ನವೆಂಬರ್ 1ರಂದು ಕರ್ನಾಟ ರಾಜ್ಯೋತ್ಸವ ಇದೆ, ಇಲ್ಲೇ ಹಾವೇರಿಯ ಹಾನಗಲ್ ರಸ್ತೆಯಲ್ಲಿರುವ ಶಿವಾ ರೆಸಿಡೆನ್ಸಿಯಲ್ಲಿ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ಬಳಿಕ ನವೆಂಬರ್ 1ರಂದು ಅವರ ಫೋನ್ ಸ್ವಿಚ್ ಆಫ್ ಆಗಿದೆ ಎಂದು ತಹಶೀಲ್ದಾರ್ ಅವರ ಪತ್ನಿ ಭಾಗ್ಯಶ್ರೀ ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಕುಟುಂಬಸ್ಥರು ಮತ್ತು ತಹಶೀಲ್ದಾರ್ ಅವರ ಚಾಲಕ ಶಿವಾ ರೆಸಿಡೆನ್ಸಿಗೆ ಹೋಗಿ ವಿಚಾರಿಸಿದಾಗ, ನ.1ರಂದು ಬೆಳಗಿನ ಜಾವ 5 ಗಂಟೆಗೆ 112ನೇ ರೂಮ್ ಖಾಲಿ ಮಾಡಿ, ಏನೂ ಹೇಳದೇ ಹೋಗಿದ್ದಾರೆ ಎಂದು ಅಲ್ಲಿನ ಸಿಬ್ಬಂದಿ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.
Next Story