Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಹಂದಿ ಸಾಕಾಣಿಕಾ ಕೇಂದ್ರದಲ್ಲಿ...

ಮಂಗಳೂರು: ಹಂದಿ ಸಾಕಾಣಿಕಾ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಹಂದಿ ಜ್ವರ ತಡೆಗಟ್ಟಲು ಮಾರ್ಗಸೂಚಿಯಂತೆ ಅಗತ್ಯಕ್ರಮ: ಡಿಸಿ ರವಿಕುಮಾರ್

3 Nov 2022 8:21 PM IST
share
ಮಂಗಳೂರು: ಹಂದಿ ಸಾಕಾಣಿಕಾ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ
ಹಂದಿ ಜ್ವರ ತಡೆಗಟ್ಟಲು ಮಾರ್ಗಸೂಚಿಯಂತೆ ಅಗತ್ಯಕ್ರಮ: ಡಿಸಿ ರವಿಕುಮಾರ್

ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

ಈ ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ. ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10 ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತಿತರರು ಸದ್ಯ ರೋಗಪೀಡಿತ ವಲಯಕ್ಕೆ ಭೇಟಿ ನೀಡಬಾರದು. ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೊಟೇಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭ ಚೆನ್ನಾಗಿ ಬೇಯಿಸಿ ನೀಡಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ. ಹಂದಿ ಪಾಲಕರು ಸೂಕ್ತ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್‌ಎಂ.ಆರ್. ತಿಳಿಸಿದ್ದಾರೆ.

share
Next Story
X