ಬಂಟ್ವಾಳ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಸೆರೆ

ಬಂಟ್ವಾಳ, ನ.3: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಬಂಧಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ.
ಕಬಕ ವಿದ್ಯಾಪುರ ನಿವಾಸಿ ಸಂಶೀರ್ ಬಂಧಿತ ಆರೋಪಿ.
ಆರೋಪಿ ಇನ್ ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿಯನ್ನು ಪ್ರೀತಿಸುವ ನೆಪ ಮಾಡಿ ಬಳಿಕ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರಿನಂತೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Next Story