ಮರಳು ಅಕ್ರಮ ಸಾಗಾಟ ಪ್ರಕರಣ: ಆರೋಪಿ ಸೆರೆ

ಮಂಗಳೂರು: ಕಡೆಕಾರಿನ ಆಡಂಕುದ್ರು ಪಟ್ಲ ಸೇತುವೆಯ ಬಳಿ ನೇತ್ರಾವತಿ ನದಿ ಕಿನಾರೆ ಕಡೆಯಿಂದ ಬುಧವಾರ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ತಡೆದು ನಿಲ್ಲಿಸಿದ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಂಕನಾಡಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಎಸ್.ಎಚ್. ಭಜಂತ್ರಿ ಬುಧವಾರ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ಪಿಕಪ್‌ನಲ್ಲಿದ್ದ ಚಾಲಕ ಅಶ್ವಿತ್ ಎಂಬಾತ ಓಡಲು ಯತ್ನಿಸಿದ್ದು, ತಕ್ಷಣ ಸಿಬ್ಬಂದಿ ವರ್ಗ ಸುತ್ತುವರಿದು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ವಿಚಾರಣೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ ಅನಧಿಕೃತವಾಗಿ ಮರಳು ಸಾಗಾಟ ಮಾಡುತ್ತಿರುವುದು ದೃಢಪಟ್ಟಿದೆ. ಅದರಂತೆ ಮರಳು ತುಂಬಿದ ಪಿಕಪ್ ವಾಹನದೊಂದಿಗೆ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story