Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದ.ಕ ಜಿಲ್ಲೆಯ ಕಬಕದಲ್ಲಿ ಕೆಎಸ್‌ಸಿಎಗೆ...

ದ.ಕ ಜಿಲ್ಲೆಯ ಕಬಕದಲ್ಲಿ ಕೆಎಸ್‌ಸಿಎಗೆ 23.25 ಎಕರೆ ಕಂದಾಯ ಜಮೀನನ್ನು ಗುತ್ತಿಗೆ ನೀಡಲು ಸಂಪುಟ ತೀರ್ಮಾನ

ಸಚಿವ ಸಂಪುಟ ಸಭೆಯ ಇತರ ನಿರ್ಣಯಗಳು

3 Nov 2022 11:14 PM IST
share
ದ.ಕ ಜಿಲ್ಲೆಯ ಕಬಕದಲ್ಲಿ ಕೆಎಸ್‌ಸಿಎಗೆ 23.25 ಎಕರೆ ಕಂದಾಯ ಜಮೀನನ್ನು ಗುತ್ತಿಗೆ ನೀಡಲು ಸಂಪುಟ ತೀರ್ಮಾನ
ಸಚಿವ ಸಂಪುಟ ಸಭೆಯ ಇತರ ನಿರ್ಣಯಗಳು

ಬೆಂಗಳೂರು, ನ.3: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮ ಸರ್ವೆ ನಂಬರ್ 260/ಪಿ1ರಲ್ಲಿ 23.25 ಎಕರೆ ಜಮೀನನ್ನು ರಾಜ್ಯ ಕ್ರಿಕೆಟ್ ಅಸೋಸಿಯೇಷನ್‍ಗೆ (Karnataka State Cricket Association) ಗುತ್ತಿಗೆ ಆಧಾರದ ಮೇಲೆ ನೀಡಲು ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸರ್ವೆ ನಂಬರ್ 73/1ರಲ್ಲಿ 0.07 ಎಕರೆ(ಏಳು ಸೆಂಟ್) ಮತ್ತು ಸರ್ವೆ ನಂಬರ್ 265/1ಎ1ಎರಲ್ಲಿ 0.03 ಎಕರೆ(ಮೂರು ಸೆಂಟ್) ಒಟ್ಟು 10 ಸೆಂಟ್ ಜಮೀನನ್ನು ಸೇವಾ ಭಾರತಿ ಸಂಸ್ಥೆಗೆ ಮಂಜೂರು ಮಾಡಲು ನಿರ್ಧರಿಸಲಾಗಿದೆ.

ಬಳ್ಳಾರಿ ನಗರದ ನಲ್ಲಚೆರವು ಪ್ರದೇಶದದಲ್ಲಿ ಒಟ್ಟು 19.36 ಎಕರೆ ಜಮೀನನ್ನು ಕ್ರಿಕೆಟ್ ಆದ ಮೈದಾನಕ್ಕಾಗಿ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‍ಗೆ ಗುತ್ತಿಗೆ ಆಧಾರದ ಮೇಲೆ ನೀಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸುರಳಿಬಾಳೆಬೈಲು ಗ್ರಾಮದಲ್ಲಿ ಒಂದು ಎಕರೆ ಗೋಮಾಳ ಜಮೀನನ್ನು ಸಾರ್ವಜನಿಕ ಸಮುದಾಯ ಭವನ ನಿರ್ಮಾಣದ ಉದ್ದೇಶಕ್ಕಾಗಿ ಶ್ರೀ ಕ್ಷತ್ರಿಯ ಮರಾಠ ಸಮಾಜಕ್ಕೆ ಮಂಜೂರು ಮಾಡಲು ನಿರ್ಧರಿಸಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಬ್ಯಾಟರಾಯನಪುರ ಗ್ರಾಮದಲ್ಲಿ ಪಿಪಿಪಿ ಯೋಜನೆಯಡಿ ಹಣ್ಣು ಮತ್ತು ತರಕಾರಿಗಳ ವಿಶೇಷ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಆಧುನಿಕ ಮಾರುಕಟ್ಟೆಯನ್ನು ನಿರ್ಮಿಸಲು ಶೋಭಾ ಅಸೆಟ್ಸ್ ಪ್ರೈವೇಟ್ ಲಿಮಿಟೆಡ್‍ಗೆ ಮಾಡಿಕೊಂಡಿದ್ದ ಒಪ್ಪಂದವನ್ನು ರದ್ದುಗೊಳಿಸಿ, ಹೊಸದಾಗಿ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ ಸರ್ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 2022-23 ಯೋಜನೆಯಡಿ ಪ್ರಸಕ್ತ ಸಾಲಿನ ಎ.21ರಂದು ಸರಕಾರಿ ಆದೇಶದನುಸಾರ ಅನುಮೋದನೆ ನೀಡಿರುವ ಕ್ರಿಯಾ ಯೋಜನೆ ಪಟ್ಟಿಯಲ್ಲಿನ ಕಾಮಗಾರಿಗಳ ಬದಲಿಗೆ ಇತರೆ ಕಾಮಗಾರಿಗಳಿಗೆ ಬಿಬಿಎಂಪಿಯ ಟೆಂಡರ್ ಆಹ್ವಾನಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

ರಾಜ್ಯ ವಿಸ್ತೃತ ಜಾಲ ಯೋಜನೆಯನ್ನು 931.15 ಕೋಟಿ ರೂ.ವೆಚ್ಚದಲ್ಲಿ ‘ಕೆಎಸ್ವಾನ್ 3.0’ರಡಿಯಲ್ಲಿ ವಿಸ್ತರಿಸಲು ಮತ್ತು ಉನ್ನತೀಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಗಚಗೆರೆ ಗ್ರಾಮದಲ್ಲಿ  ರಾಜ್ಯ ಗೃಹ ಮಂಡಳಿಯು ವಸತಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿನ ಮಾಲಕರಿಗೆ ಸಾಂತ್ವನ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕಬಕದಲ್ಲಿ ಕೆಎಸ್‌ಸಿಎಗೆ 23.25 ಎಕರೆ ಕಂದಾಯ ಜಮೀನು, ಕಾನೂನು ಇಲಾಖೆಯ ನಿರ್ದೇಶನ ಮೀರಿ ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಿದ ಇಲಾಖೆ

share
Next Story
X