ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಭಾರತ ಪ್ರತಿಕ್ರಿಯಿಸಿದ್ದು ಹೀಗೆ...
ಹೊಸದಿಲ್ಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಮೇಲೆ ನಡೆದ ಗುಂಡು ದಾಳಿ, ಪಾಕಿಸ್ತಾನದಲ್ಲಿನ ಬೆಳವಣಿಗೆಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಭಾರತ ಹೇಳಿದೆ.
"ಇದು ಇದೀಗ ನಡೆದಿರುವ ಬೆಳವಣಿಗೆಯಾಗಿದೆ. ನಾವು (ಇದನ್ನು) ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು (ಪಾಕಿಸ್ತಾನದಲ್ಲಿ) ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ವಜೀರಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಬಲಗಾಲಿಗೆ ಬ್ಯಾಂಡೇಜ್ ಹಾಕಲಾಗಿದೆ, ಗಾಯವು ಗಂಭೀರವಾಗಿಲ್ಲ ಹಾಗೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
Next Story