ಮಾಜಿ ಟಿವಿ ನಿರೂಪಕ ಇಸುದನ್ ಗಧ್ವಿ ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಗುಜರಾತ್ ರಾಜ್ಯದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಇಸುದನ್ ಗಧ್ವಿ ಅವರನ್ನು ಹೆಸರಿಸಿದೆ.
ಮಾಜಿ ಪತ್ರಕರ್ತ ಹಾಗೂ ಟಿವಿ ನಿರೂಪಕ ಇಸುದನ್ ಗಧ್ವಿ ಅವರು ಗುಜರಾತ್ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಕುರಿತು ಎಎಪಿ ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ 73 ರಷ್ಟು ಮತಗಳನ್ನು ಗಳಿಸಿದ್ದಾರೆ.
ಪಂಜಾಬ್‌ನಲ್ಲಿ ಇದೇ ರೀತಿಯ ಸಮೀಕ್ಷೆಯ ನಂತರ ಪಕ್ಷವು ಭಗವಂತ್ ಸಿಂಗ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿತ್ತು.
ಇಸುದನ್ ಗಧ್ವಿ ಕಳೆದ ವರ್ಷ ಜೂನ್‌ನಲ್ಲಿ ಎಎಪಿ ಸೇರಿದ್ದರು.
ಎಎಪಿಯ ಗುಜರಾತ್ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಕೂಡ ಸಿಎಂ ಅಭ್ಯರ್ಥಿಯಾಗುವ ರೇಸ್‌ನಲ್ಲಿದ್ದರು.
ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
Next Story





