Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಸ್ಪತ್ರೆಗಳಲ್ಲಿ ಅಮಾನವೀಯವಾಗಿ...

ಆಸ್ಪತ್ರೆಗಳಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾ, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ: ಸಚಿವ ಡಾ.ಸುಧಾಕರ್

''ತುರ್ತು ಪರಿಸ್ಥಿತಿಯಲ್ಲಿ ದಾಖಲೆಗಳು ಮುಖ್ಯವಲ್ಲ, ಜೀವ ಮುಖ್ಯ''

4 Nov 2022 6:00 PM IST
share
ಆಸ್ಪತ್ರೆಗಳಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾ, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ: ಸಚಿವ ಡಾ.ಸುಧಾಕರ್
''ತುರ್ತು ಪರಿಸ್ಥಿತಿಯಲ್ಲಿ ದಾಖಲೆಗಳು ಮುಖ್ಯವಲ್ಲ, ಜೀವ ಮುಖ್ಯ''

ಬೆಂಗಳೂರು, ನ. 4: ‘ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾಗೊಳಿಸಲು ಕಾನೂನು ಬದಲಾವಣೆಗೆ ಮುಖ್ಯಮಂತ್ರಿ ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ತಾಯಿ ಕಳೆದುಕೊಂಡ ಹೆಣ್ಣು ಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ರಾಜ್ಯ ಸರಕಾರದಿಂದಲೇ 5ಲಕ್ಷ ರೂ.ಎಫ್‍ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು’ ಎಂದು ಹೇಳಿದರು.

‘ತುಮಕೂರಿನಲ್ಲಿ ನಡೆದ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್‍ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ನೋಟಿಸ್ ನೀಡಿ, 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.

‘ಈ ರೀತಿಯ ಘಟನೆ ಮರುಕಳಿಸಬಾರದು. ಅದಕ್ಕಾಗಿ ಎಲ್ಲ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳು ಮುಖ್ಯವಲ್ಲ. ತಾಯಿ ಕಾರ್ಡ್, ಆಧಾರ್ ಕಾರ್ಡ್‍ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರಕಾರವೇ ವೆಚ್ಚ ಭರಿಸುತ್ತದೆ’ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ತುಮಕೂರು | ತಾಯಿ, ಅವಳಿ ಮಕ್ಕಳು ಸಾವು ಪ್ರಕರಣ: ಜಿಲ್ಲಾಸ್ಪತ್ರೆಯ ವೈದ್ಯೆ ಸೇರಿ ನಾಲ್ವರು ಅಮಾನತು

ಕರಾಳ ಘಟನೆ: ಎಲ್ಲ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ. ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ, ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಲಿದೆ’ ಎಂದು ನುಡಿದರು.

‘ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು. ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ’ ಎಂದು ಅವರು ಇದೇ ವೇಳೆ ಬೇಸರ ವ್ಯಕ್ತಪಡಿಸಿದರು.

ಬಹಿರಂಗ ಸವಾಲು: ‘ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯ ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ, ಇವರು ರಾಜಕೀಯ ನಾಯಕರು ಮಾತ್ರವಲ್ಲ, ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ. ಇಷ್ಟು ಕೆಳಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದು’ ಎಂದು ಅವರು ತಿರುಗೇಟು ನೀಡಿದರು.

‘ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಆರೋಗ್ಯ ಸಚಿವ ಸ್ಥಾನಕ್ಕೆ ನೀಡುತ್ತೇನೆ. ಇದು ಬಹಿರಂಗ ಸವಾಲು’ ಎಂದು ಸುಧಾಕರ್ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

share
Next Story
X