ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ಸಂಸತ್‌ಗೆ ಆಯ್ಕೆ

ಉಡುಪಿ : ರಾಜ್ಯ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಕಾರ್ಕಳ ಶ್ರೀಮಧ್ಭುವನೇಂದ್ರ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಸಿದ್ದಿರಾಜ್ ಶೆಟ್ಟಿ ಹಾಗೂ ಉಡುಪಿ ಬೋರ್ಡ್ ಹೈಸ್ಕೂಲ್‌ನ 9ನೇ ತರಗತಿಯ ಧನ್ವಿ ಆಯ್ಕೆಯಾಗಿದ್ದಾರೆ.
ಇವರು ಇತ್ತೀಚೆಗೆ ಉಡುಪಿಯಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ‘ಮಕ್ಕಳ ಹಕ್ಕುಗಳ ಸಂಸತ್ತು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇವರು ಬೆಂಗಳೂರಲ್ಲಿ ನಡೆಯುವ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಯವರೊಂದಿಗೆ ಸಂವಾದ ನಡೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Next Story





