ನ.6ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇದಾಜ್ಞೆ

ಉಡುಪಿ : ಪ್ರಸಕ್ತ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿ.ಇ.ಟಿ) ಯು ನವೆಂಬರ್ 6ರಂದು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಪರೀಕ್ಷೆ ನಡೆಯುವ ಕೇಂದ್ರಗಳು: ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜು, ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಕನ್ನರ್ಪಾಡಿ ಸೈಂಟ್ ಮೇರೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ, ಕಡಿಯಾಳಿ ಯು. ಕಮಲಾಬಾಯಿ ಪ್ರೌಢ ಶಾಲೆ, ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಕ್ರಿಶ್ಚಿಯನ್ ಹೈಸ್ಕೂಲ್, ಸೈಂಟ್ ಸಿಸಿಲೀಸ್ ಹೈಸ್ಕೂಲ್ ಮತ್ತು ಆದಿಉಡುಪಿ ಹೈಸ್ಕೂಲ್.
ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು, ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.







