Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಶೇ. 34 ರಷ್ಟು ಶಾಲೆಗಳಲ್ಲಿ ಮಾತ್ರ...

ದೇಶದ ಶೇ. 34 ರಷ್ಟು ಶಾಲೆಗಳಲ್ಲಿ ಮಾತ್ರ ಇಂಟರ್ನೆಟ್‌ ಸೌಲಭ್ಯ: ಸರ್ಕಾರದ ಅಂಕಿಅಂಶಗಳಿಂದ ಬಹಿರಂಗ

4 Nov 2022 8:12 PM IST
share
ದೇಶದ ಶೇ. 34 ರಷ್ಟು ಶಾಲೆಗಳಲ್ಲಿ ಮಾತ್ರ ಇಂಟರ್ನೆಟ್‌ ಸೌಲಭ್ಯ: ಸರ್ಕಾರದ ಅಂಕಿಅಂಶಗಳಿಂದ ಬಹಿರಂಗ

ಹೊಸದಿಲ್ಲಿ: ದೇಶದ ಶೇ 34 ರಷ್ಟು ಶಾಲೆಗಳಲ್ಲಿ ಮಾತ್ರ ಇಂಟರ್ನೆಟ್‌ ಸೌಲಭ್ಯವಿದ್ದು ಶೇ 50 ರಷ್ಟು ಹೆಚ್ಚಿನ ಶಾಲೆಗಳಲ್ಲಿರುವ ಕಂಪ್ಯೂಟರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಶಿಕ್ಷಣ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿದ ಅಂಕಿಅಂಶಗಳಿಂದ ತಿಳಿದು ಬಂದಿದೆ ಎಂದು theprint.in ವರದಿ ಮಾಡಿದೆ.

ಯುನಿಫೈಡ್‌ ಡಿಸ್ಟ್ರಿಕ್ಟ್‌ ಇನ್ಫಾರ್ಮೇಶನ್‌ ಸಿಸ್ಟಂ ಫಾರ್‌ ಎಜುಕೇಶನ್‌ 2021-22 ಅಂಕಿಅಂಶಗಳ ಪ್ರಕಾರ ದೇಶದಲ್ಲಿರುವ ಒಟ್ಟು 14,89,115 ಶಾಲೆಗಳ ಪೈಕಿ 5,04,989 ಅಥವಾ ಶೇ 33.9 ರಷ್ಟು ಶಾಲೆಗಳಿಗೆ ಅಂತರ್ಜಾಲ ಸೌಲಭ್ಯವಿದೆ. ಈ ಶಾಲೆಗಳ ಪೈಕಿ ಶೇ. 24.2 ರಷ್ಟು ಶಾಲೆಗಳು ಸರ್ಕಾರಿ ಶಾಲೆಗಳಾಗಿದ್ದರೆ, ಶೇ 53.1 ಶಾಲೆಗಳು ಅನುದಾನಿತ ಹಾಗೂ ಶೇ 59.6 ರಷ್ಟು ಶಾಲೆಗಳು ಖಾಸಗಿ ಶಾಲೆಗಳಾಗಿವೆ.

ದೇಶದ ಒಟ್ಟು ಶಾಲೆಗಳ ಪೈಕಿ ಶೇ 45.8 ಶಾಲೆಗಳಲ್ಲಿ ಕಂಪ್ಯೂಟರ್‌ಗಳು ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿವೆ. ಈ ಶಾಲೆಗಳ ಪೈಕಿ ಶೇ 35.8 ಶಾಲೆಗಳು ಸರ್ಕಾರಿ ಶಾಲೆಗಳಾಗಿವೆ.

ಆದರೆ 2018-19 ರಿಂದೀಚೆಗೆ ಅಂತರ್ಜಾಲ ಸೌಲಭ್ಯಗಳು ಹಾಗೂ ಕಾರ್ಯನಿರತ ಕಂಪ್ಯೂಟರ್‌ಗಳಿರುವ ಶಾಲೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿವೆ. ಅಂತರ್ಜಾಲ ಸೌಲಭ್ಯ ಇರುವ ಶಾಲೆಗಳು 2018-19 ರಲ್ಲಿ ಶೇ 18.73 ಆಗಿದ್ದರೆ 2021-22 ರಲ್ಲಿ ಈ ಸಂಖ್ಯೆ 33.9 ಶೇ ಗೆ ಏರಿಕೆಯಾಗಿದೆ.

ದಿಲ್ಲಿ ಮತ್ತು ಲಕ್ಷದ್ವೀಪದ ಶೇ. 100 ರಷ್ಟು ಶಾಲೆಗಳಲ್ಲಿ ಕಾರ್ಯನಿರತ ಕಂಪ್ಯೂಟರ್‌ಗಳಿವೆ. ಪಂಜಾಬ್‌ ಮತ್ತು ಚಂಡೀಗಢದ ಶೇ 99 ರಷ್ಟು ಶಾಲೆಗಳಲ್ಲಿ ಈ ಸವಲತ್ತು ಇದೆ.  ಅಂತರ್ಜಾಲ ಸೌಲಭ್ಯ ಇರುವ ಶಾಲೆಗಳ ಪೈಕಿ ದಿಲ್ಲಿ ಆಗ್ರ ಸ್ಥಾನದಲ್ಲಿದ್ದು ಇಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಕಂಪ್ಯೂಟರ್‌ ಮತ್ತು ಅಂತರ್ಜಾಲ ಸೌಲಭ್ಯವಿದೆ. ಚಂಡೀಗಢ ಮತ್ತು ಪುದುಚ್ಚೇರಿಯ ಶೇ 98 ರಷ್ಟು ಶಾಲೆಗಳಿಗೆ ಅಂತರ್ಜಾಲ ಸೌಲಭ್ಯವಿದೆ.

ಇದನ್ನೂ ಓದಿ: ಜಗತ್ತಿನಾದ್ಯಂತ ಹಾವು ಕಡಿತದಿಂದ ಸಾವನ್ನಪ್ಪಿದವರಲ್ಲಿ ಶೇ. 80% ಭಾರತೀಯರು: ವರದಿ

share
Next Story
X