Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸೌಹಾರ್ದ ಸೊಸೈಟಿಗಳಲ್ಲಿ 20 ಸಾವಿರ ಕೋಟಿ...

ಸೌಹಾರ್ದ ಸೊಸೈಟಿಗಳಲ್ಲಿ 20 ಸಾವಿರ ಕೋಟಿ ರೂ. ವಂಚನೆ: ಆರೋಪ

ಠೇವಣಿದಾರರಿಂದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಪತ್ರ

ಜಿ.ಮಹಾಂತೇಶ್ಜಿ.ಮಹಾಂತೇಶ್5 Nov 2022 9:21 AM IST
share
ಸೌಹಾರ್ದ ಸೊಸೈಟಿಗಳಲ್ಲಿ 20 ಸಾವಿರ ಕೋಟಿ ರೂ. ವಂಚನೆ: ಆರೋಪ
ಠೇವಣಿದಾರರಿಂದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು: ರಾಜ್ಯದಲ್ಲಿ ಕಾರ್ಯಾ ಚರಿಸುತ್ತಿರುವ ಸಹಕಾರಿ ಬ್ಯಾಂಕ್ ಮತ್ತು ಕ್ರೆಡಿಟ್ ಸೌಹಾರ್ದ ಸೊಸೈಟಿಗಳಲ್ಲಿ ಹೂಡಿಕೆಯಾಗಿರುವ ಒಟ್ಟು ನಿಶ್ಚಿತ ಠೇವಣಿ ಹಣದ ಪೈಕಿ ಅಂದಾಜು 20,000 ಕೋಟಿ ರೂಪಾಯಿಯನ್ನು ಆಡಳಿತ ಮಂಡಳಿಗಳು ನುಂಗಿ ಹಾಕಿವೆ. ಈ ಸಂಬಂಧ ಶೈಲಗಿರಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟೀವ್ ಸೇರಿದಂತೆ ವಿವಿಧ ಸಹಕಾರಿ ಬ್ಯಾಂಕ್ ಮತ್ತು ಸೌಹಾರ್ದ ಸೊಸೈಟಿಗಳಲ್ಲಿ ಹಣ ಹೂಡಿರುವ ಠೇವಣಿದಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವನ್ನು ಬರೆದಿದ್ದಾರೆ.

ಕುರುಹೀನ ಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟೀವ್ ಲಿಮಿಟೆಡ್, ಶ್ರೀ ವೈಭವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಕಣ್ವ, ಮಹಾಗಣಪತಿ, ನಾಗರತ್ನ, ಮಿಲಿನೇಯಂ, ಕಲ್ಪವೃಕ್ಷ ಕ್ರೆಡಿಟ್ ಸೇರಿದಂತೆ ಒಟ್ಟು ರಾಜ್ಯದ 1,000ಕ್ಕೂ ಹೆಚ್ಚು ಸೌಹಾರ್ದ ಸೊಸೈಟಿಗಳಲ್ಲಿನ ಠೇವಣಿದಾರರಿಗೆ ಅಪಾರ ಪ್ರಮಾಣದಲ್ಲಿ ವಂಚನೆಯಾಗಿದೆ ಎಂದು ಠೇವಣಿದಾರರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ. ಈ ಪತ್ರದ ಪ್ರತಿಯು ‘ಣhe-ಜಿiಟe.iಟಿ’ಗೆ ಲಭ್ಯವಾಗಿದೆ.

ಬೆಂಗಳೂರಿನ ಬಸವನಗುಡಿಯ ಗಾಂಧಿಬಝಾರ್‌ನಲ್ಲಿರುವ ಶ್ರೀ ಶೈಲಗಿರಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟೀವ್‌ನಲ್ಲಿ ವಂಚನೆಗೊಳಗಾದ 200 ಮಂದಿ ಠೇವಣಿದಾರರು ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿರುವಂತೆ ಪ್ರಾಥಮಿಕ ಹಂತದಲ್ಲಿ 20 ಕೋಟಿ ರೂ. ಅವ್ಯವಹಾರವಾಗಿದೆ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ಸೊಸೈಟಿಯ ಅಧ್ಯಕ್ಷ ನವೀನ್ ಡಿ.ಪಿ., ಅನಿಲ್‌ಕುಮಾರ್, ಸಿಇಒ ಪಲ್ಲವಿ ಎನ್  ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪ್ರತಿಯೂ ‘ಣhe-ಜಿiಟe.iಟಿ’ಗೆ ಲಭ್ಯವಾಗಿದೆ.

 ಬಸವನಗುಡಿಯ ಪೊಲೀಸ್ ಠಾಣೆಯಲ್ಲಿ 2022ರ ಮಾರ್ಚ್‌ನಲ್ಲಿ ದಾಖಲಾಗಿರುವ ಎಫ್‌ಐಆರ್ ಕುರಿತು ನೊಂದ ಹೂಡಿಕೆದಾರರು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದಿದ್ದಾರೆ. ದೂರು ನೀಡಿರುವ ಹೆಗಡೆ ನಾಗಪತಿ, ವೀಣಾ ಹೆಗಡೆ ಮತ್ತು ಕುಮಾರ್ ಸಿಎ ಎಂಬವರು ಶ್ರೀ ಶೈಲಗಿರಿ ಸೌಹಾರ್ದ ಕ್ರೆಡಿಟ್ ಕೋ ಅಪರೇಟೀವ್‌ನಲ್ಲಿ ಒಟ್ಟು 43.50 ಲಕ್ಷ ರು.ಗಳನ್ನು ಹೂಡಿದ್ದರು. ಆದರೆ ಈ ಸಹಕಾರಿ ಸಂಸ್ಥೆಯು ಈ ಹಣವನ್ನು ಪಾವತಿಸದೇ ಸಂಯುಕ್ತ ಸಹಕಾರಿ ಸೂಚನೆಯನ್ನು ಉಲ್ಲಂಘಿಸಿದೆ ಎಂಬುದು ಎಫ್‌ಐಆರ್‌ನಿಂದ ತಿಳಿದು ಬಂದಿದೆ.

‘ಸಹಕಾರಿಯ ಚಟುವಟಿಕೆಗಳು ಸಂಶಯಾ ಸ್ಪದವಾಗಿದ್ದು ಮೋಸದ ಉದ್ದೇಶ ಹೊಂದಿರುವ ಸಾಧ್ಯತೆ ಇದೆ,’ ಎಂದು ದೂರು ಸಲ್ಲಿಸಿದ್ದರು. ಸೊಸೈಟಿಯ ಅಧ್ಯಕ್ಷರು, ಸಿಇಒ ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ನಂಬಿಕೆ ದ್ರೋಹ, ಮೋಸ, ವಂಚನೆ ಮತ್ತು ಅಧಿಕಾರ ದುರುಪಯೋಗ ಎಸಗಿರುವ ಆರೋಪಗಳಡಿಯಲ್ಲಿ ಐಪಿಸಿ 1860 (406, 415, 417,419, 420, 465,470,468, 471 ಅಡಿಯಲ್ಲಿ ಮತ್ತು ಕೆಪಿಡಬ್ಲ್ಯುಐಐಡಿ ಅಡಿಯಲ್ಲಿಯೂ ಎಫ್‌ಐಆರ್ ದಾಖಲಾಗಿರುವುದು ಗೊತ್ತಾಗಿದೆ.

‘ರಾಜ್ಯದಲ್ಲಿ ಸುಮಾರು 20 ಲಕ್ಷ ಠೇವಣಿದಾರರು ತೊಂದರೆಯಲ್ಲಿ ಸಿಕ್ಕಿಕೊಂಡಿದ್ದಾರೆ. ಠೇವಣಿ ಹಣಕ್ಕೆ ಮೋಸವಾಗಿರುವುದು ಮಾತ್ರವಲ್ಲದೇ ಸಹಕಾರಿ ಸಂಸ್ಥೆಗಳ ಮೇಲೆ ವಿಶ್ವಾಸವೇ ಕಳೆದುಹೋಗಿದೆ. ಹೀಗಾಗಿ ಸೆಬಿ, ರಿಸರ್ವ್ ಬ್ಯಾಂಕ್‌ಗಳ ಮೂಲಕ ಸಹಕಾರ ಬ್ಯಾಂಕ್, ಸೌಹಾರ್ದ ಕ್ರೆಡಿಟ್ ಸೊಸೈಟಿಗಳಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಸೊಸೈಟಿ ಮತ್ತು ಸಹಕಾರ ಬ್ಯಾಂಕ್‌ಗಳ ಆರಂಭಕ್ಕೆ ಬಿಗಿಯಾದ ಮಾರ್ಗಸೂಚಿಗಳನ್ನು ರೂಪಿಸಬೇಕು. ಇಲ್ಲವಾದಲ್ಲಿ ಠೇವಣಿ ಹೂಡಿಕೆದಾರರು ಕಷ್ಟದಲ್ಲಿ ಸಿಲುಕುವ ಸಾಧ್ಯತೆ ಇದೆ’ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಠೇವಣಿದಾರರು ಅಳಲು ತೋಡಿಕೊಂಡಿದ್ದಾರೆ.

ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ 4,167 ಹೆಚ್ಚು ನಕಲಿ ಕಂಪೆನಿಗಳು ವಹಿವಾಟು ನಡೆಸಿವೆ ಎಂದು ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಸಹಕಾರ ಇಲಾಖೆಯೇ ಮಾಹಿತಿ ಒದಗಿಸಿದ್ದರೂ ರಾಜ್ಯ ಸರಕಾರದ ಗಮನಕ್ಕೆ ಬಂದಿಲ್ಲ ಎಂದು ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಅವರು ಸದನದ ದಾರಿತಪ್ಪಿಸಿದ್ದರು. ಈ ಯಾವ ವ್ಯವಹಾರಗಳೂ ತನ್ನ ಗಮನಕ್ಕೆ ಬಂದಿಲ್ಲ ಎಂದು ಉತ್ತರಿಸುವ ಮೂಲಕ ರಾಜ್ಯ ಸರಕಾರದ ಸಹಕಾರ ಇಲಾಖೆಯೇ ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆಗೆ ಮಂಡಿಸಿದ್ದ  ಕಾರ್ಯಸೂಚಿ ಮತ್ತು ವಿವರಣೆಯನ್ನು ತಳ್ಳಿ ಹಾಕಿದ್ದರು.

 ನಕಲಿ ಕಂಪೆನಿಗಳು ಆದಾಯ ತೆರಿಗೆ ಕುರಿತಾದ ವಿವರಗಳನ್ನು ಸಲ್ಲಿಸದಿರುವ ಕುರಿತು ಕಾರ್ಯಸೂಚಿ ಪಟ್ಟಿಯಲ್ಲಿ ಸೇರಿಸಿತ್ತು. ಕಂಪೆನಿಗಳ ನೋಂದಣಿ ಇಲಾಖೆ (ಆರ್‌ಒಸಿ) ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ರಮ ವ್ಯವಹಾರ, ಅಕ್ರಮ ಆಸ್ತಿಗಳನ್ನು ಅಡಗಿಸಿಡುವುದಕ್ಕೆ ಪೂರಕವಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು  ಗುರುತಿಸಲಾಗಿರುವ ಒಟ್ಟು ನಕಲಿ (ಶೆಲ್) ಕಂಪೆನಿಗಳ ಪೈಕಿ 4,167 ಕಂಪೆನಿಗಳು ವಾರ್ಷಿಕ ರಿಟರ್ನ್ಸ್ ಸಲ್ಲಿಸಿರಲಿಲ್ಲ.  ಅಲ್ಲದೆ ಈ ನಕಲಿ ಕಂಪೆನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿಯೇ ಖಾತೆ ತೆರೆದು ಕೋಟ್ಯಂತರ  ರೂ. ವಹಿವಾಟು ನಡೆಸಿವೆ ಎಂಬ ಸಂಗತಿಯು ರಾಜ್ಯಮಟ್ಟದ ಸಮನ್ವಯ ಸಮಿತಿಯು 2022ರ ಜೂನ್ 27ರ ಇಂದು ನಡೆದಿದ್ದ 56ನೇ ಸಭೆಗೆ ಸಲ್ಲಿಸಿರುವ ಕಾರ್ಯಸೂಚಿ ಪಟ್ಟಿಯಲ್ಲಿ ವಿವರಣೆ ಒದಗಿಸಿತ್ತು.

 ರಿಜಿಸ್ಟ್ರರ್ ಆಫ್ ಕಂಪೆನೀಸ್ ಮಾಹಿತಿ ಪ್ರಕಾರ ಶೆಲ್ ಕಂಪನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಖಾತೆ ತೆರೆದಿವೆ. ಈ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್, ನಗರ ಸಹಕಾರಿ ಬ್ಯಾಂಕ್‌ಗಳಿಂದ ಮಾಹಿತಿಯನ್ನು ಬಯಸಿದೆ ಎಂಬುದು ಕಾರ್ಯಸೂಚಿ ಪಟ್ಟಿಯಿಂದ ತಿಳಿದು ಬಂದಿತ್ತು.

 ಎಸ್‌ಎಲ್‌ಸಿಸಿ (ಸ್ಟೇಟ್ ಲೆವೆಲ್ ಕೋ ಆರ್ಡಿನೇಷನ್ ಕಮಿಟಿ)ಯ 54ನೇ ಸಭೆಯಲ್ಲಿ ಕಂಪೆನಿಗಳ  ಕೆವೈಸಿ ವಿವರಗಳ ಕ್ರೋಢೀಕೃತ ಮಾಹಿತಿ ಒದಗಿಸುವ  ಕುರಿತು ಚರ್ಚೆ ನಡೆದಿತ್ತು. ಆದರೆ ಬ್ಯಾಂಕ್‌ಗಳು ಈ ಮಾಹಿತಿಯನ್ನು ಆರ್‌ಬಿಐನೊಂದಿಗೆ ಹಂಚಿಕೊಂಡಿರಲಿಲ್ಲ.

ಅಕ್ರಮ ಹಣ ವರ್ಗಾವಣೆ

ೀಾಜ್ಯದಲ್ಲಿ ಕಳೆದ 6 ತಿಂಗಳಿನಲ್ಲಿ ಹಲವು ಕ್ರೆಡಿಟ್ ಸೌಹಾರ್ದ ಸೊಸೈಟಿಗಳು ಮತ್ತು 40,000 ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆಯಾಗಿರುವ 20 ಲಕ್ಷಕ್ಕೂ ಅಧಿಕ ಸದಸ್ಯರ ನಿಶ್ಚಿತ ಠೇವಣಿ ಅಂದಾಜು 20,000 ಕೋಟಿ ರೂ.ಗಳನ್ನು ಆಡಳಿತ ಮಂಡಳಿಗಳು ನುಂಗಿ ಹಾಕಿವೆ. ಈ ಹಣವನ್ನು ಆಡಳಿತ ಮಂಡಳಿಗಳು ಹವಾಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆಯಲ್ಲದೇ ಇನ್ನೂ ಹಲವು ಆಡಳಿತ ಮಂಡಳಿಗಳು ಠೇವಣಿ ಮೊತ್ತವನ್ನು ದುರುಪಯೋಗಪಡಿಸಿಕೊಂಡಿವೆ ಮತ್ತು ಅಕ್ರಮವಾಗಿ ಹಣ ವರ್ಗಾವಣೆ ಮಾಡಿವೆ  ಎಂದು ಹೂಡಿಕೆದಾರರು ದೂರಿನಲ್ಲಿ ತಿಳಿಸಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X