Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಡಿ ಅಧಿಕಾರಿಗಳು ಯಾಕೆ ಪದೇ ಪದೇ ನೋಟಿಸ್...

ಈಡಿ ಅಧಿಕಾರಿಗಳು ಯಾಕೆ ಪದೇ ಪದೇ ನೋಟಿಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ: ಡಿ.ಕೆ.ಶಿವಕುಮಾರ್

5 Nov 2022 4:55 PM IST
share
ಈಡಿ ಅಧಿಕಾರಿಗಳು ಯಾಕೆ ಪದೇ ಪದೇ ನೋಟಿಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು, ನ. 5: ‘ಜಾರಿ ನಿರ್ದೇಶನಾಲಯ(ಈಡಿ)ದ ಅಧಿಕಾರಿಗಳು ನನಗೆ ಪದೇ ಪದೇ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈಡಿ ಸಮನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. 

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಡಿ ಅವರಿಗೆ ನಾನು ಎಲ್ಲ ಉತ್ತರ ನೀಡಿದ್ದೆ. ಆದರೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆಂದು ನ.7ಕ್ಕೆ ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರ ಡಿ.ಕೆ.ಸುರೇಶ್ ಅವರಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

‘ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳುಹಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‍ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ’ ಎಂದು ಶಿವಕುಮಾರ್ ತಿಳಿಸಿದರು.

‘ತುಮಕೂರು ಆಸ್ಪತ್ರೆ ಅಧಿಕಾರಿಗಳಿಂದಾಗಿ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವು ಘಟನೆ ಸರಕಾರದ ವೈಫಲ್ಯ. ಈ ಸರಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ. ಸರಕಾರ ಈಗ ಅಧಿಕಾರಿಗಳ ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ’ ಎಂದು ಅವರು ಪ್ರಶ್ನಿಸಿದರು.

‘ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ರೂ.ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್‍ನಿಂದ ಸತ್ತವರಿಗೂ ಸರಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ರಾಜ್ಯದ ಎಲ್ಲ ಭಾಗಗಳಿಂದ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರಕಾರದ ವೈಫಲ್ಯ' ಎಂದು ಅವರು ದೂರಿದರು.

‘ದೇಶದೆಲ್ಲೆಡೆ ಜನ ಸಿನಿಮಾ ಹಾಡುಗಳನ್ನು ತಮ್ಮ ವಿಡಿಯೋಗಳಿಗೆ ಬಳಸುತ್ತಾರೆ. ಅದರಲ್ಲಿ ಯಾವ ಅಪರಾಧ ಇದೆಯೋ ಎಂದು ತಿಳಿಯುತ್ತಿಲ್ಲ. ಇಂತಹ ಪ್ರಕರಣಗಳ ಅನೇಕ ಉದಾಹರಣೆ ಪಟ್ಟಿ ನೀಡಬಹುದು. ಇದನ್ನು ನಾವು ಕಾನೂನಿನ ಮೂಲಕ ಎದುರಿಸುತ್ತೇವೆ' ಎಂದು ಶಿವಕುಮಾರ್, ಭಾರತ್ ಜೋಡೋ ಯಾತ್ರೆಗೆ ಸಿನಿಮಾ ಹಾಡಿನ ಬಳಕೆ ಬಗ್ಗೆ ಪ್ರತಿಕ್ರಿಯಿಸಿದರು.

share
Next Story
X