ಹೂಡೆ: ಬ್ರಹ್ಮಾವರ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ

ಉಡುಪಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ರಹ್ಮಾವರ ವಲಯದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಇತ್ತೀಚೆಗೆ ಪಡು ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.
ಈ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿ ಅಧ್ಯಕ್ಷ ಡಾ.ಶಹನಾವಾಜ್ ಮಾತನಾಡಿ, ವಿದ್ಯಾರ್ಥಿಗಳು ಸೃಜನಾತ್ಮಕವಾಗಿ ಬೆಳೆಯಲು ಈ ವಿಜ್ಞಾನ ವಸ್ತು ಪ್ರದರ್ಶನ ಮಾದರಿ ಎಂದು ಹೇಳಿದರು.
ವೇದಿಕೆಯಲ್ಲಿ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ, ಮುಖ್ಯೋ ಪಾಧ್ಯಾಯಿನಿ, ಕುಮ್ರಗೋಡು ಪ್ರೌಢಶಾಲೆಯ ಸಹಶಿಕ್ಷಕಿ ವೀಣಾ ನಾಯ್ಕ್, ಕಾವುಡಿ ಪ್ರೌಢಶಾಲೆಯ ಸಹಶಿಕ್ಷಕ ಸೋಮಪ್ಪ, ಕೆಮ್ಮಣ್ಣು ಪ್ರೌಢಶಾಲೆಯ ಶಿಕ್ಷಕ ಶಂಕರ್ ಆಚಾರ್ ಮುಂತಾದವರು ಉಪಸ್ಥಿತರಿದ್ದರು. ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಲಾಯಿತು.
ಅಧ್ಯಕ್ಷತೆಯನ್ನು ಶಿಕ್ಷಣ ಇಲಾಖೆ ಅಧಿಕಾರಿ ನಾಗಾರ್ಜುನ ವಹಿಸಿದ್ದರು. ಶಿಕ್ಷಣ ಸಂಯೋಜಕ ಬಿಂದಿಯಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಲಿಹಾತ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಸ್ವಾಗತಿಸಿ ದರು. ಸಾಲಿಹಾತ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುನಂದಾ ಕಾರ್ಯಕ್ರಮ ನಿರ್ವಹಿಸಿದರು. ಸುಮಾರು 12 ಶಾಲೆಗಳ 80 ವಿದ್ಯಾರ್ಥಿಗಳು ತಾವೇ ಸ್ವಂತವಾಗಿ ರಚಿಸಿದ ವಿಜ್ಞಾನದ ಮಾದರಿಗಳನ್ನು ತಂದು ಇಲ್ಲಿ ಪ್ರದರ್ಶಿಸಿದರು.





