ಕೋಡಿಯಲ್ಲಿ ಬ್ಯಾರೀಸ್ ವಿದ್ಯಾರ್ಥಿಗಳಿಂದ ಕೋಟಿಕಂಠ ಗಾಯನ

ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಗಳಿಂದ ಕುಂದಾಪುರ ಕೋಡಿಯ ಪ್ರೇಕ್ಷಣೀಯ ಸ್ಥಳವಾದ ದೀಪಸ್ತಂಭದ ಮುಂಭಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶನದಂತೆ ಕೋಟಿ ಕಂಠ ಗಾಯನ ನಡೆಯಿತು.
ಈ ಅಭಿಯಾನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರಹ್ಮಾನ್, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಲಹಾ ಮಂಡಳಿಯ ಸದಸ್ಯ ಅಬುಷೇಕ್ ಸಾಹೇಬ್, ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸಂದೀಪ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Next Story





