Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವ್ಯಾಜ್ಯಗಳ ಪರಿಹಾರಕ್ಕಾಗಿ ‘ಮಧ್ಯಸ್ಥಿಕೆ...

ವ್ಯಾಜ್ಯಗಳ ಪರಿಹಾರಕ್ಕಾಗಿ ‘ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ’ಗೆ ಸಿದ್ಧ: ಮುಖ್ಯಮಂತ್ರಿ ಬೊಮ್ಮಾಯಿ

5 Nov 2022 7:37 PM IST
share
ವ್ಯಾಜ್ಯಗಳ ಪರಿಹಾರಕ್ಕಾಗಿ ‘ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ’ಗೆ ಸಿದ್ಧ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ನ. 5: ‘ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಅಗತ್ಯ ಪೂರಕ ವ್ಯವಸ್ಥೆಗಳನ್ನು ಒದಗಿಸಲು ಸರಕಾರ ಸಿದ್ಧವಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಭವನದ 5, 6 ಮತ್ತು 7ನೆ ಮಹಡಿ ಉದ್ಘಾಟಿಸಿ ಮಾತನಾಡಿದ ಅವರು, ‘ನಮ್ಮ ಸಮಾಜದಲ್ಲಿ ಬಹಳಷ್ಟು ವ್ಯಾಜ್ಯಗಳಿವೆ. ಇಲ್ಲಿ ನ್ಯಾಯ ದೊರೆಯುವ ವ್ಯವಸ್ಥೆಯಲ್ಲಿಯೂ ಬದಲಾವಣೆ ಆಗಬೇಕಿದೆ. ಇದಕ್ಕಾಗಿ ಲೋಕ ಅದಾಲತ್ ಹಾಗೂ ಮಧ್ಯಸ್ಥಿಕೆಯಿಂದ ವ್ಯಾಜ್ಯಗಳನ್ನು ಪರಿಹರಿಸಲಾಗುತ್ತಿದೆ’ ಎಂದು ಹೇಳಿದರು.

ವಕೀಲರ ಲೈಬ್ರರಿ ಡಿಜಿಟಲೀಕರಣ: ‘ವಕೀಲರ ಭವನ ದೊಡ್ಡ ಪ್ರಮಾಣದಲ್ಲಿ ನಿರ್ಮಿಸಿ, ಕುವೆಂಪು ಅವರ ಹೆಸರಿಟ್ಟಿರುವುದು ಸಂತೋಷ. ವಕೀಲರ ಭವನದಲ್ಲಿ ಮಹಿಳಾ ವಕೀಲರಿಗೆ ಪ್ರತ್ಯೆಕ ಕೊಠಡಿ ಮಾಡಿರುವುದು ಸಂತಸ ತಂದಿದೆ. ಮೊದಲು ದೊಡ್ಡ ಗ್ರಂಥಾಲಯವಿದ್ದರೆ ದೊಡ್ಡ ವಕೀಲ ಅಂತ ಭಾವಿಸುತ್ತಿದ್ದರು. ಇಂದು ಸಣ್ಣ ಗ್ರಾಮ ಪಂಚಾಯತಿಯ ಲೈಬ್ರರಿಯೂ ಡಿಜಿಟಲೈಸ್ ಆಗಿದೆ. ಬೆಂಗಳೂರು ವಕೀಲರ ಲೈಬ್ರರಿಯನ್ನು ಡಿಜಿಟಲೀಕರಣ ಮಾಡಲು ಸರಕಾರ ಸಹಕಾರ ನೀಡಲಿದೆ’ ಎಂದು ಹೇಳಿದರು.

ನೈತಿಕ-ಮಾನವ ನಿರ್ಮಿತ ಕಾನೂನು ಹತ್ತಿರ ತರಬೇಕು: ‘ವಕೀಲರ ಪಾತ್ರ ಬಹಳ ಮುಖ್ಯ ಇದೆ. ವಕೀಲರಿಲ್ಲದೆ ನ್ಯಾಯ ದೊರೆಯುವ ವ್ಯವಸ್ಥೆಯಿಲ್ಲ. ನಾವೇ ಮಾಡಿಕೊಂಡ ಕಾನೂನು ಹಾಗೂ ನೈತಿಕ ಕಾನೂನಿನ ನಡುವೆ ವ್ಯತ್ಯಾಸ ಇದೆ. ನೈತಿಕ ಕಾನೂನಿನಲ್ಲಿ ಸತ್ಯ ಹೇಳಿದರೆ ಒಳ್ಳೆಯದಾಗುತ್ತದೆ. ಸುಳ್ಳು ಹೇಳಿದರೆ ಶಿಕ್ಷೆ ಆಗುತ್ತದೆ, ಕಳ್ಳತನ ಮಾಡಿದರೆ ಶಿಕ್ಷೆ ಆಗುತ್ತದೆ ಎಂದು ಇದೆ. ನೈತಿಕ ಕಾನೂನು ಹಾಗೂ ಮಾನವನ ಕಾನೂನು ಹತ್ತಿರ ತರಬೇಕು’ ಎಂದು ನುಡಿದರು.

ಗೊಂದಲ ಇರಬಾರದು: ‘ನೇಪಾಳದಲ್ಲಿ ಒಂದು ಪದ್ದತಿ ಇದೆ. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಯಾವುದೇ ನ್ಯಾಯಾಲಯಗಳಿಲ್ಲ. ಅಲ್ಲಿನ ಜನರು ಸುಶಿಕ್ಷಿತರಿಲ್ಲದಿದ್ದರೂ, ಅವರಲ್ಲಿಯೇ ನಿಯಮಗಳನ್ನು ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ನಾವು ಸುಶಿಕ್ಷಿತರಾಗಿದ್ದರೂ ಕಾನುನು ಸಮಸ್ಯೆಗಳು ಹೆಚ್ಚಾಗುತ್ತವೆ. ಯಾವುದೇ ಕಾನೂನಿನಲ್ಲಿ ಗೊಂದಲ ಇರಬಾರದು, ಸ್ಪಷ್ಟತೆ ಇರಬೇಕು. ಇಲ್ಲದಿದ್ದರೆ ಸಾಕಷ್ಟು ಸಮಸ್ಯೆ ಉಂಟಾಗುತ್ತದೆ’ ಎಂದು ಅವರು ತಿಳಿಸಿದರು.

ಲಾಯರ್ಸ್ ಚೇಂಬರ್ಸ್ ಸ್ಥಾಪಿಸಲು ಅನುದಾನ: ‘ಬೆಂಗಳೂರು ವಕಿಲರ ಸಂಘ ಅತ್ಯಂತ ಮಹತ್ವದಾಗಿದ್ದು, ಸಂಘ ಉತ್ತಮ ಕೆಲಸ ಮಾಡುತ್ತಿದೆ. ನ್ಯಾಯಾಧೀಶರ ಹುದ್ದೆಗಳನ್ನು ಶೀಘ್ರದಲ್ಲಿ ತುಂಬಲು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿಗೆ ಲಾಯರ್ಸ್ ಚೆಂಬರ್ಸ್ ಮಾಡಲು ಮುಂದಿನ ಬಜೆಟ್‍ನಲ್ಲಿ ಅನುದಾನ ಘೋಷಣೆ ಮಾಡಲಾಗುವುದು’ ಎಂದು ಅವರು ಭರವಸೆ ನೀಡಿದರು.

ಬಿಡಿಎ ಪ್ಲಾಟ್‍ಗಳನ್ನು ಖರೀದಿಸಲು ಶೇ.10ರಷ್ಟು ರಿಯಾಯಿತಿ: ‘ವಕೀಲರ ವಿಮೆ ಯೋಜನೆಯಡಿ ವಕೀಲರ ಹಿತದೃಷ್ಟಿಯಿಂದ ನೀಡಲಾಗಿರುವ ಅನುದಾನ ಸದುಪಯೋಗವಾಗಲು ವಕೀಲ ಸಂಘ ಗಮನಹರಿಸಬೇಕು. ಕಾನೂನು ರಕ್ಷಣಾ ಕಾಯ್ದೆಯನ್ನು ಡಿಸೆಂಬರ್‍ನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು.  ಬೆಂಗಳೂರಿನಲ್ಲಿ ಬಿಡಿಎ ಪ್ಲಾಟ್‍ಗಳನ್ನು ಖರೀದಿಸಲು ವಕಿಲರಿಗೆ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು’ ಎಂದು ಪ್ರಕಟಿಸಿದರು.

ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್, ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಳೆ, ಕಟ್ಟಡ ಸಮಿತಿ ಅಧ್ಯಕ್ಷ ಬಿ.ವಿ.ಆಚಾರ್ಯ, ಉಪಾಧ್ಯಕ್ಷ ಕೆ.ಎನ್.ಪುಟ್ಟೇಗೌಡ, ವಕೀಲರ ಸಂಘದ ಕಾರ್ಯದರ್ಶಿ ಟಿ.ಜಿ.ರವಿ, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಾ ರೆಡ್ಡಿ ಸೇರಿದಂತೆ ಇನ್ನಿತರರು ಹಾಜರಿದ್ದರು.

share
Next Story
X