ಉದ್ಯೋಗ ನೆರವಿಗೆ ವೆಬ್‌ಪೋರ್ಟಲ್ ಅನಾವರಣ

ಮಂಗಳೂರು, ನ.5: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್‌ಪೋರ್ಟಲ್‌ನ್ನು ಅನಾವರಣಗೊಳಿಸಲಾಗಿದೆ.
ಈ ವೆಬ್‌ಪೋರ್ಟಲ್‌ನಲ್ಲಿ ಪ್ರತಿಷ್ಠಿತ ಕಂಪನಿಗಳು ಅಭ್ಯರ್ಥಿಗಳ ಬಯೋಡೇಟಾವನ್ನು ಪರಿಶೀಲಿಸಿ ಉದ್ಯೋಗಕ್ಕೆ ಪರಿಗಣಿಸಲಿದೆ. ಹಾಗಾಗಿ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ ಅಭ್ಯರ್ಥಿಗಳು ವಿದ್ಯಾರ್ಹತೆ, ಕೌಶಲ ಹಾಗೂ ಅನುಭವವನ್ನು http://skillconnect.kaushalkar.com ನಲ್ಲಿ ನೋಂದಾಯಿಸಿ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ: 0824-2453222ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story