Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರದ ಧಮನಕಾರಿ ನೀತಿಗಳು ಕಾರ್ಮಿಕರ...

ಸರಕಾರದ ಧಮನಕಾರಿ ನೀತಿಗಳು ಕಾರ್ಮಿಕರ ಅಸ್ತಿತ್ವಕ್ಕೆ ಧಕ್ಕೆ: ರವೀಂದ್ರನಾಥ್

ವಿಮಾ ನೌಕರರ ಸಂಘದ ವಿಭಾಗೀಯ ಸಮ್ಮೇಳನ ಉದ್ಘಾಟನೆ

5 Nov 2022 9:09 PM IST
share
ಸರಕಾರದ ಧಮನಕಾರಿ ನೀತಿಗಳು ಕಾರ್ಮಿಕರ ಅಸ್ತಿತ್ವಕ್ಕೆ ಧಕ್ಕೆ: ರವೀಂದ್ರನಾಥ್
ವಿಮಾ ನೌಕರರ ಸಂಘದ ವಿಭಾಗೀಯ ಸಮ್ಮೇಳನ ಉದ್ಘಾಟನೆ

ಉಡುಪಿ : ಸರಕಾರದ ಇಂದಿನ ಧಮನಕಾರಿ ನೀತಿಗಳು ಕಾರ್ಮಿಕ ವರ್ಗದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದೆ. ಇದು ದೇಶದ ಪ್ರಜಾತಂತ್ರದ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ನೀತಿಯಾಗಿದೆ ಎಂದು ದಕ್ಷಿಣ ಮಧ್ಯ ವಲಯ ವಿಮಾ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ವಿ.ಎನ್.ಎಸ್.ರವೀಂದ್ರನಾಥ್ ಆರೋಪಿಸಿದ್ದಾರೆ.

ಉಡುಪಿ ಎಲ್.ಐ.ಸಿ. ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕಿನ ವಜ್ರ ಮಹೋತ್ಸವ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ವಿಮಾ ನೌಕರರ ಸಂಘ ಉಡುಪಿ ವಿಭಾಗದ ೬೪ನೇ ವಿಭಾಗೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.  

ದೇಶದ ಅಸಂಖ್ಯಾತ ಜನಸಾಮಾನ್ಯರು ಮತ್ತು ಕಾರ್ಮಿಕ ವರ್ಗವು ಕೇವಲ ಚುನಾವಣೆಗಳಲ್ಲಿ ಮತ ನೀಡುವ ಮಾಧ್ಯಮದಂತೆ ಸೀಮಿತಗೊಳಿಸಿ, ಅವರ ಸಂವಿಧಾನಬದ್ಧ ಹಕ್ಕುಗಳನ್ನು ನಿರಾಕರಿಸಿ, ದೇಶದ ಬೆರಳೆಣಿಕೆೆಯಷ್ಟಿರುವ ಕಾರ್ಪೊರೇಟ್ ದೊರೆಗಳನ್ನು ಸಾಕಷ್ಟು ರಿಯಾಯಿತಿಯೊಂದಿಗೆ ಬೆಳೆಸಿ ಅವರೇ ದೇಶದ ನಿಜವಾದ ಸಂಪತ್ತು ಸೃಷ್ಟಿಸುವವರು ಎಂಬುದಾಗಿ ಸರಕಾರ ಪ್ರಚಾರ ಮಾಡುತ್ತಿದೆ ಎಂದು ಅವರು ದೂರಿದರು.

ಪ್ರಪಂಚದ ಹಸಿವಿನ ಸೂಚ್ಯಂಕದಲ್ಲಿ ೧೨೦ ಬಡರಾಷ್ಟಗಳ ಪೈಕಿ ಭಾರತವು ೧೦೭ನೇ ಸ್ಥಾನದಲ್ಲಿದೆ. ಅಸಮಾನತೆಯ ಸೂಚ್ಯಾಂಕದಲ್ಲಿ ೧೬೦ರಲ್ಲಿ ೧೨೩ನೇ ಸ್ಥಾನ ಮತ್ತು ದೇಶದ ನಿರುದ್ಯೋಗದ ಪರಿಸ್ಥಿತಿಯು ಶೇ.೭.೮ ಸರಾಸರಿಯನ್ನು ಮೀರಿದೆ. ಅಸಮಾನತೆಯನ್ನು ಹೋಗಲಾಡಿಸಿ ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಆತ್ಮನಿರ್ಭರ ಭಾರತದ ಹೆಸರಲ್ಲಿ ಇಂದಿನ ಸರಕಾರವು ಲಾಭ ಗಳಿಸುತ್ತಿರುವ ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳನ್ನು ಕಾರ್ಪೋರೇಟ್ ವಲಯಕ್ಕೆ ಹಸ್ತಾಂತರಿಲಾಗಿದೆ ಎಂದರು.

ದಕ್ಷಿಣ ಮಧ್ಯ ವಲಯ ವಿಮಾ ನೌಕರರ ಒಕ್ಕೂಟದ ಜೊತೆ ಕಾರ್ಯದರ್ಶಿ ಜೆ.ಸುರೇಶ್ ಅವರು ಮಾತನಾಡಿ, ಕೇಂದ್ರ ಸರಕಾರದ ಸುಲಿಗೆಕೋರ ನೀತಿ ಗಳಿಂದಾಗಿ ಜನರು ಭ್ರಮನಿರಸನರಾಗಿದ್ದಾರೆ. ಭಾರತೀಯರ ಜೀವಕ್ಕೆ ಬೆಲೆಯೇ ಇಲ್ಲದ ಈ ಪರಿಸ್ಥಿತಿಯಲ್ಲಿ ಜನರು ಈಗ ತಕ್ಕ ಮಟ್ಟಿಗೆ ಎಚ್ಚೆತ್ತುಕೊಂಡಿದ್ದಾರೆ. ತನ್ನ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸಲು ಈ ಸರಕಾರವು ಸಂವಿಧಾನದ ಎಲ್ಲಾ ಅಂಗಗಳನ್ನು ವ್ಯವಸ್ಥಿತವಾಗಿ ನಿರ್ನಾಮಗೊಳಿಸಲು ಹೊರಟಿದೆ.  ಯಾವುದೇ ಗೊತ್ತುಗುರಿ ಇಲ್ಲದ ಆರ್ಥಿಕ ನೀತಿಗಳು ಮತ್ತು ಜನರನ್ನು ದಿಕ್ಕು ತಪ್ಪಿಸುವ ಸಂವಿಧಾನ ವಿರೋಧಿ ನೀತಿಗಳು ದೇಶವನ್ನು ಅಧಃಪತನದತ್ತ ಒಯ್ಯು ತ್ತಿದೆ ಎಂದರು.

ದಕ್ಷಿಣ ಮಧ್ಯ ವಲಯ ವಿಮಾ ನೌಕರರ ಒಕ್ಕೂಟದ ಜೊತೆ ಕಾರ್ಯದರ್ಶಿ ಜಿ.ತಿರುಪತಯ್ಯ ಮಾತನಾಡಿ, ವಿಮಾ ಕ್ಷೇತ್ರದ ಐ.ಆರ್.ಡಿ.ಎ ಪ್ರಸ್ತಾವಿಸಿದ ಸುಧಾರಣಾ ನೀತಿಗಳು ದೇಶದ ಖಾಸಗಿ ವಲಯದ ವಿಮಾ ಸಂಸ್ಥೆಗಳ ಹಿತಾಸಕ್ತಿಗೆ ಪೂರಕವಾಗಿದ್ದು ಇದರಿಂದಾಗಿ ಸಾರ್ವಜನಿಕ ವಲಯದ ಎಲ್‌ಐಸಿ ಯ ಅಸ್ತಿತ್ವಕ್ಕೆ ಮಾರಕವಾಗಲಿದೆ. ಕಾರ್ಮಿಕರಲ್ಲಿ ರಾಜಕೀಯ ಪ್ರಜ್ಞೆಯ ಜಾಗೃತಿಯು ಮುಂದಿನ ಹೋರಾಟಗಳಲ್ಲಿ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.

ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ಖಜಾಂಚಿ ಶಶಿಧರ ಗೊಲ್ಲ ಮಾತನಾಡಿದರು. ಅಧ್ಯಕ್ಷತೆಯನ್ನು  ಸಂಘದ ಅಧ್ಯಕ್ಷ ಕೆ.ವಿಶ್ವನಾಥ್ ವಹಿಸಿದ್ದರು. ಸಭೆಯಲ್ಲಿ ವಿಮಾ ಪಿಂಚಣಿದಾರರ ಸಂಘದ ಜತೆ ಕಾರ್ಯದರ್ಶಿ ವಿಠಲ ಮೂರ್ತಿ ಆಚಾರ್ಯ, ಎಲ್‌ಐಸಿ ಅಧಿಕಾರಿಗಳ ಸಂಘದ ಉಡುಪಿ ವಿಭಾಗದ ಅಧ್ಯಕ್ಷ ಎಂ.ಆರ್.ಸಾಮಗ., ಎಲ್‌ಐಸಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಮುಂದಾಳು ಮಂಜುನಾಥ ಹೆಬ್ಬಾರ್, ವಿಮಾ ನೌಕರರ ಸಂಘದ ಮಹಿಳಾ ಸಂಚಾಲಕಿ ನಿರ್ಮಲ ಉಪಸ್ಥಿತರಿದ್ದರು.  

೨೦೨೨-೨೩ರ ಸಾಲಿಗೆ ಸಂಘದ ನೂತನ ಅಧ್ಯಕ್ಷರಾಗಿ ಕೆ.ವಿಶ್ವನಾಥ್, ಉಪಾಧ್ಯಕ್ಷರುಗಳಾಗಿ ಡೆರಿಕ್ ಎ.ರೆಬೆಲ್ಲೋ ಮತ್ತು ನಿರ್ಮಲ, ಪ್ರಧಾನ ಕಾರ್ಯ ದರ್ಶಿಯಾಗಿ  ಪ್ರಭಾಕರ ಬಿ.ಕುಂದರ್, ಜತೆ ಕಾರ್ಯದರ್ಶಿಗಳಾಗಿ ಉಮೇಶ್ ಮತ್ತು ಕವಿತಾ ಎಸ್., ಕೋಶಾಧಿಕಾರಿಯಾಗಿ ಶ್ರೀಪಾದ ಹೆರ್ಳೆ ಹಾಗೂ ಉಪ ಕೋಶಾಧಿಕಾರಿಯಾಗಿ ಚರಣ್‌ರಾಜ್. ಆಯ್ಕೆಯಾದರು.

ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಿ.ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು. ಕವಿತಾ ಎಸ್. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ ದರು. ಸಮ್ಮೇಳನದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ಆಗಮಿಸಿರುವ ಸುಮಾರು ೨೦೦ ಸದಸ್ಯರು ಭಾಗವಹಿಸಿದ್ದರು.

‘ದೇಶದ ಕೋಟಿಗಟ್ಟಲೆ ಜನರ ಉಳಿತಾಯದಿಂದ ಕಟ್ಟಿದ ಎಲ್‌ಐಸಿಯ ಶೇರುಗಳನ್ನು ವಿಕ್ರಯ ಮಾಡಲು ಸರಕಾರಕ್ಕೆ ಯಾವುದೇ ಹಕ್ಕಿಲ್ಲ. ಶೇರುವಿಕ್ರಯ ನಡೆಯುವ ದೇಶದ ಜನತೆಯ ಹಾಗೂ ನಿಗಮದ ಪಾಲಿಸಿದಾರರ ಹಿತಾಸಕ್ತಿ ಗಳಿಗೆ ಅನುಗುಣವಾಗಿಲ್ಲ. ಅಂತೆಯೇ ೬೦,೦೦೦ ಕೋಟಿಯಷ್ಟು ಬೆಲೆಬಾಳುವ ಎಲ್‌ಐಸಿ ಶೇರುಗಳನ್ನು ಕಾರ್ಪೋರೇಟ್ ವಲಯದ ಅಣತಿಯಂತೆ ೨೦,೭೬೦ ಕೋಟಿ ರೂ.ಗೆ ಅಪಮೌಲ್ಯಗೊಳಿಸಿ ಬಿಡುಗಡೆಗೊಳಿಸಿರುವುದು ದೇಶದ ಜನತೆಗೆ ಮತ್ತು ಎಲ್.ಐ.ಸಿಗೆ ಮಾಡಿರುವ ದ್ರೋಹ’
-ಟಿ.ವಿ.ಎನ್.ಎಸ್.ರವೀಂದ್ರನಾಥ್

share
Next Story
X