Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಂದಿನ ಸರಕಾರದ ಸೋಲಾರ್ ಪರವಾನಿಗೆ...

ಹಿಂದಿನ ಸರಕಾರದ ಸೋಲಾರ್ ಪರವಾನಿಗೆ ಹಂಚಿಕೆ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿ

6 Nov 2022 2:56 PM IST
share
ಹಿಂದಿನ ಸರಕಾರದ ಸೋಲಾರ್ ಪರವಾನಿಗೆ ಹಂಚಿಕೆ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿ

ಬೆಂಗಳೂರು, ನ.6: ಹಿಂದಿನ ಸರಕಾರದ ಅವಧಿಯಲ್ಲಿ ಖಾಸಗಿಯವರಿಗೆ ಸೋಲಾರ್ ನಿಂದ ವಿದ್ಯುತ್ ಉತ್ಪಾದನೆಗೆ ನೀಡಿರುವ ಪರವಾನಿಗೆ ವಿತರಣೆಯಲ್ಲಿ ಆಗಿರುವ ಅವ್ಯವಹಾರವನ್ನು ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ಕೇವಲ 7 ಸೆಕೆಂಡಿನಲ್ಲಿ ಆನ್ ಲೈನ್ ಮೂಲಕ ನೀಡಿರುವ ಪಟ್ಟಿಯನ್ನು ಗಮನಿಸಿದರೆ ಯಾವ ರೀತಿ ಆಗಿದೆ ಎಂದು ತಿಳಿಯುತ್ತದೆ. ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ನ.20ರಂದು  ಬಳ್ಳಾರಿಯಲ್ಲಿ ಎಸ್.ಸ್ಟಿ ಮೋರ್ಚಾ ಸಮಾವೇಶ

 ನಾಳೆಯಿಂದ ಜನಸಂಕಲ್ಪ ಯಾತ್ರೆ ಪುನಃ ಪ್ರಾರಂಭವಾಗಲಿದೆ. ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳು ಸತತ ವಾಗಿ ಕಾರ್ಯಕ್ರಮಗಳಿವೆ. ಡಿಸೆಂಬರ್ ವರೆಗೆ ಜನಸಂಕಲ್ಪ ಯಾತ್ರೆ ಮುಂದುವರಿಯಲಿದೆ. ಬಳ್ಳಾರಿಯಲ್ಲಿ ನ.20ರಂದು ಎಸ್.ಟಿ ಮೋರ್ಚಾ ಸಮಾವೇಶ ಹಾಗೂ ನ.30ರಂದು ಮೈಸೂರಿನಲ್ಲಿ ಎಸ್.ಸಿ ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ನವೆಂಬರ್ 11ರಂದು ರಾಜ್ಯಕ್ಕೆ ಪ್ರಧಾನಿ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.11ರಂದು ರಾಜ್ಯಕ್ಕೆ ಆಗಮಿಸಿದ್ದು ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ -  ಚೆನ್ನೈ - ಮೈಸೂರು- ಬೆಂಗಳೂರು  ರೈಲನ್ನು ಉದ್ಘಾಟಿಸಲಿದ್ದಾರೆ. ಇದು ಬಹಳ ದಿನಗಳ ನಮ್ಮ ಬೇಡಿಕೆಯಾದ  ಹೈಸ್ಪೀಡ್ ರೈಲನ್ನು ಪ್ರಧಾನಿಗಳು ಈಡೇರಿಸುತ್ತಿದ್ದಾರೆ.  ಜೊತೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಇದರ  ಅವಶ್ಯಕತೆ  ಕೂಡ ಇತ್ತು. ಬೆಂಗಳೂರಿಗೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದು, 25 ಲಕ್ಷ ಜನರನ್ನು ನಿಭಾಯಿಸುವ ಸಾಮರ್ಥ್ಯ ವುಳ್ಳ, ನೂರು ಕೌಂಟರ್ ಗಳುಳ್ಳ  ಅಂತರರಾಷ್ಟ್ರೀಯ ಟರ್ಮಿನಲ್ ಉದ್ಘಾಟನೆಯಾಗುತ್ತಿದೆ. ಎರಡೂ ಟರ್ಮಿನಲ್ ಕೂಡಿದರೆ, ದಿಲ್ಲಿಯ ನಂತರ ದೇಶದ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಕರ್ನಾಟಕ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರವಾಸೋದ್ಯಮ, ಕೈಗಾರಿಕೆ, ಐ.ಟಿ, ಬಿಟಿ, ಆರ್.ಅಂಡ್ ಡಿ ವಲಯಗಳಿಗೂ ದೊಡ್ಡ ಅನುಕೂಲ ವಾಗಲಿದೆ ಎಂದರು.

ನಂತರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣವಾಗುತ್ತಿದೆ. ಕೆಂಪೇಗೌಡರು ವಿಕಾಸಪುರುಷರು. ಹೀಗಾಗಿ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಇಡೀ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳಿಂದ ಉದ್ಘಾಟನೆಯಾಗುತ್ತಿರುವುದು ಅತ್ಯಂತ ಯೋಗ್ಯವಾಗಿದೆ. ನಂತರ ಸಾರ್ವಜನಿಕ ಕಾರ್ಯಕ್ರಮವಿರಲಿದೆ ಎಂದರು.

ಎಲ್ಲಾ ಆಯಾಮಗಳಲ್ಲಿ ತನಿಖೆ

 ಶಾಸಕ ರೇಣುಕಾಚಾರ್ಯ ಅವರ ಸಹೋದರನ  ನಿಗೂಢ ಸಾವಿಗೆ ಸಂಬಂಧಿಸಿದಂತೆ ಶಾಸಕರೊಂದಿಗೆ ಮಾತನಾಡಿದ್ದು,ಅವರ ಪ್ರಕಾರ ಏನು ನಡೆದಿದೆ ಎಂದು  ಮಾಹಿತಿಯನ್ನು ನೀಡಿ,  ಸೂಕ್ತ ನಿರ್ದೇಶನವನ್ನು ಐ.ಜಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ನೀಡುವುದಾಗಿ ತಿಳಿಸಿದ್ದೇನೆ. ಮರಣೋತ್ತರ ಪರೀಕ್ಷೆಯಲ್ಲಿ ಬಹುತೇಕ ಸತ್ಯಾಂಶ ಹೊರಬರುತ್ತದೆ ನಂತರ ತನಿಖೆಯನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕೆಂದು ನಿರ್ಧರಿಸಲಾಗುತ್ತದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು ಎಂದರು.

share
Next Story
X