ಉಡುಪಿ ನಗರಸಭೆಯಿಂದ ಕಾರ್ಯಾಚರಣೆ: 45 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಶ: 10,200 ರೂ. ದಂ

ಉಡುಪಿ, ನ.6: ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗಳಿಗೆ ವಿರುದ್ಧ ಶನಿವಾರ ಕಾರ್ಯಾಚರಣೆ ನಡೆಸಿದ ಉಡುಪಿ ನಗರಸಭೆ ಅಧಿಕಾರಿಗಳು, ಸುಮಾರು 45 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 10,200 ರೂ. ದಂಡ ವಿಧಿಸಿದ್ದಾರೆ.
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ಅಂಗಡಿ ಮಾಲಕರು ಗಳು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು, ಮಾರುಕಟ್ಟೆ ಸ್ಥಳ), ಶಾಪಿಂಗ್ ಕೇಂದ್ರಗಳು, ಸಿನಿಮಾ ಮಾಲ್ ಗಳು, ಮನೆಗಳು, ಪ್ರವಾಸೋದ್ಯಮ ಸ್ಥಳಗಳು, ಶಾಲೆಗಳು, ಕಾಲೇಜುಗಳು, ಕಛೇರಿ ಸಂಕೀರ್ಣಗಳು, ಆಸ್ಪತ್ರೆಗಳು, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಇದನ್ನು ಬಳಕೆ ಮಾಡುವ ವ್ಯಾಪಾರಿಗಳಿಗೆ ದಂಡ ವಿಧಿಸಿ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವ ಸಾರ್ವಜನಿಕರಿಗೂ ದಂಡ ವಿಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.





