Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಡಿಪುವಿನಲ್ಲಿ ಕುಲಾಲ ಸಮುದಾಯ ಭವನದ...

ಮುಡಿಪುವಿನಲ್ಲಿ ಕುಲಾಲ ಸಮುದಾಯ ಭವನದ ಉದ್ಘಾಟನೆ

6 Nov 2022 9:12 PM IST
share
ಮುಡಿಪುವಿನಲ್ಲಿ ಕುಲಾಲ ಸಮುದಾಯ ಭವನದ ಉದ್ಘಾಟನೆ

ಕೊಣಾಜೆ: ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ಅವರ 100ನೇ  ಜನ್ಮ ವರ್ಷಾಚರಣೆ ಪ್ರಯುಕ್ತ ಮುಡಿಪುವಿನಲ್ಲಿ ನೂತನವಾಗಿ ನಿರ್ಮಿಸಲಾದ ಡಾ.ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ನೂತನ ಕುಲಾಲ ಸಮುದಾಯ ಭವನದ ಉದ್ಘಾಟನೆ ರವಿವಾರ ನಡೆಯಿತು.

ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲ ಸ್ವಾಮೀಜಿ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ,  ಮಕ್ಕಳ  ಭವಿಷ್ಯದ ಬಗ್ಗೆ ಚಿಂತಿಸುವ ಕಾಲ ಇದು.  ಹಿರಿಯರ ಇತಿಹಾಸವನ್ನು ಮಕ್ಕಳಿಗೆ ತಿಳಿಸುವ ಕಾರ್ಯ ಆಗಬೇಕು ಜೊತೆಗೆ ನೈತಿಕ ಬದ್ದತೆ, ಮೌಲ್ಯವನ್ನು ತಿಳಿಸುವ ಕಾರ್ಯ ಆಗಬೇಕು. ಕುಲಾಲ ಸಮಾಜಕ್ಕೆ ರಾಜಕೀಯ ಸ್ಥಾನಮಾನ ಅಗತ್ಯವಿದ್ದು, ಇಡೀ ಸಮಾಜ ಒಗ್ಗಟ್ಟಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಪ್ರಸ್ತುತ ದಿನಗಳಲ್ಲಿ ಪ್ರಾಕೃತಿಕ ವೈಪರೀತ್ಯಕ್ಕೆ ಕಾರಣವೇನು ಎಂಬುದನ್ನು ನಾವು ಅರಿತಹೊಳ್ಳಬೇಕು, ವಿಜ್ಞಾನ ಎಷ್ಟು ಮುಂದೆ ಹೋದರೂ ಅಜ್ಞಾನದಿಂದ‌ ನಾವು ಹೊರಬಂದಿಲ್ಲ. ಜೀವನದಲ್ಲಿ ಕೃತಜ್ಞತಾ ಮನೋಭಾವ ಅಗತ್ಯವಿದ್ದು, ಜಾತಿ ಸಂಘರ್ಷ ಅನಗತ್ಯ ಎಂದರು.

ಹಿರಿಯರು, ಅವರು ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕುಲಾಲ ಭವನಕ್ಕೆ ಅಮ್ಮೆಂಬಳ ಬಾಳಪ್ಪ ಅವರ ಹೆಸರಿಡುವ ಮೂಲಕ ಕುಲಾಲ ಸಮುದಾಯ ಎಲ್ಲಾ ಸಮಾಜದ ಪ್ರೀತಿಗೆ ಪಾತ್ರವಾಗಿದೆ ಎಂದರು.

ಶಾಸಕ ಯು.ಟಿ.ಖಾದರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಮಾಜಕ್ಕೆ ಕುಲಾಲ ಸಮುದಾಯದ ಕೊಡುಗೆ ಅಪಾರ. ನಮ್ಮ ಸಂಪತ್ತು ಕೇವಲ ಕೇವಲ ಕೆಲವೇ ವರ್ಗಕ್ಕೆ ಸೀಮಿತವಾಗದೆ ಎಲ್ಲರಿಗೂ ಹಂಚಿ ತಿನ್ನುವ ಕಾರ್ಯ ಆಗಬೇಕು.‌ ಅಮ್ಮೆಂಬಳ ಬಾಳಪ್ಪ ನಮ್ಮ ನಾಡು ಕಂಡ ಶ್ರೇಷ್ಠ ನಾಯಕ. ಅವರ ಹೆಸರಿನಲ್ಲಿ ಮುಡಿಪುವಿನಲ್ಲಿ ನಡುವೆ ನಿರ್ಮಾಣವಾಗಲಿರುವ ಡಾ.ಅಮ್ಮೆಂಬಳ ಬಾಳಪ್ಪ ವೃತ್ತಕ್ಕೆ ಸಹಕಾರವಿದೆ ಎಂಬ ಭರವಸೆ  ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಶಶಿಕಲಾ ಮಂಜನಾಡಿ,‌ ಡಾ.ಸತೀಶ್ ಕೊಣಾಜೆ, ಡಾ.ರಶ್ಮಿ ಅಮ್ಮೆಂಬಳ ಇವರನ್ನು ಸನ್ಮಾನಿಸಲಾಯಿತು.

ಮುಡಿಪು ಕುಲಾಲ ಸಂಘದ ಅಧ್ಯಕ್ಷ ಪುಂಡರೀಕಾಕ್ಷ ಅಧ್ಯಕ್ಷತೆ ವಹಿಸಿದ್ದರು.  ಕುಲಶೇಖರ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಸುಂದರ ಕುಲಾಲ್ ಶಕ್ತಿನಗರ, ಮೈಸೂರು ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ನಿವೃತ್ತ ತಹಶೀಲ್ದಾರ ಬಿ.ಎಸ್.ಕುಲಾಲ್, ಕುರ್ನಾಡು ಪಂಚಾಯಿತಿ ಅಧ್ಯಕ್ಷ ಗಣೇಶ್ ನಾಯ್ಕ್, ಕೈರಂಗಳ ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಂ ಭಟ್,‌ ಮುಡಿಪು ಕುಲಾಲ ಸಂಘದ ಮಾಜಿ ಅಧ್ಯಕ್ಷ ವೆಂಕಪ್ಪ ಮಾಸ್ತರ್ ಅಸೈಗೋಳಿ, ಜಿಲ್ಲಾ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ಸುರೇಶ್ ಕುಲಾಲ್, ಕಸ್ತೂರಿ ಪಂಜ, ಚಂದ್ರಹಾಸ ಪಂಡಿತೌಸ್, ರೂಪಾ ಡಿ.ಬಂಗೇರ, ಕಮಲಾಕ್ಷಿ ಕೆ.ಕಾಸರಗೋಡು, ಮಮತಾ ಗಟ್ಟಿ, ಭಾಸ್ಕರ ಎಂ.ಪೆರುವಾಯಿ, ರಾಮ ಯು., ನವೀನ್ ಪಾದಲ್ಪಾಡಿ, ವಕೀಲ ರವೀಂದ್ರ ಮುನ್ನಿಪ್ಪಾಡಿ, ಸುಕುಮಾರ್, ಪುರಂದರ, ಜಗದೀಶ್ ಆಳ್ವ ಕೂವೆತ್ತಬೈಲ್, ಬಾಸ್ಕರ ಕುತ್ತಾರ್, ಕಟ್ಟಡ ಸಮಿತಿಯ ಗೋಪಾಲ ಬಂಗೇರ, ರಾಮಕೃಷ್ಣ ಪೈ , ದುಷ್ಯಂತ, ನವೀನ್ ಕುಲಾಲ್ ಪುತ್ತೂರು, ಗಂಗಾಧರ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ರಾಜಾರಾಮ ಭಟ್ ಅವರು ತಮ್ಮ ಅಮ್ಮೆಂಬಳ ಸಹಕಾರಿ ಬ್ಯಾಂಕ್ ಕಟ್ಟಡದಲ್ಲಿ ನೂತನವಾಗಿ ನಡುವೆ ನಿರ್ಮಾಣ ವಾಗಲಿರುವ ಸಭಾಭವನಕ್ಕೆ ಅಮ್ಮೆಂಬಳ ಬಾಳಪ್ಪ ಅವರ ಹೆಸರಿಡುವುದಾಗಿ ಘೋಷಿಸಿದರು.
ಲತಾ ಮುಡಿಪು ಸ್ವಾಗತಿಸಿದರು. ಸದಾನಂದ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಬಂಗೇರ ವಂದಿಸಿದರು.  ಪ್ರವೀಣ್ ಬಸ್ತಿ ಹಾಗೂ ರಾಧಾಕೃಷ್ಣ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು. ‌

ಸಭಾ ಕಾರ್ಯಕ್ರಮದ ಬಳಿಕ ಪ್ರಾಧ್ಯಾಪಕ ದುಗ್ಗಪ್ಪ ಕಜೆಕಾರ್ ಅವರು 'ಭೂಸುಧಾರಣಾ ಮಂಡಳಿಯ ಅಗ್ರಮಾನ್ಯ ಸದಸ್ಯರಾಗಿ ಅಮ್ಮೆಂಬಳ ಬಾಳಪ್ಪರು' ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. 

share
Next Story
X