ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ: ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚಿನ್ನ ಬೆಳ್ಳಿ ಪದಕ

ಮಂಗಳೂರು: ನಗರದ ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಯಾದ ವಿನೀತ್ ಕುಮಾರ್ ರವಿವಾರ ಉಡುಪಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆಯ ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕುಮಿಟೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಮಯೂರ್ ಡಿ ಶೆಟ್ಟಿಯವರು ಕಟಾ ಮತ್ತು ಕುಮಿಟೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್, ಪ್ರಧಾನ ಸಲಹೆಗಾರರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
Next Story