ತಲಪಾಡಿ : ಆರ್‌ಟಿಒ ಕಚೇರಿಗೆ ಲೋಕಾಯುಕ್ತ ದಾಳಿ

ಉಳ್ಳಾಲ: ತಲಪಾಡಿ ಆರ್‌ಟಿಒ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದೆ.
ಕೇರಳ-ಮಂಗಳೂರು ಮಧ್ಯೆ ಸಂಚರಿಸುತ್ತಿರುವ ಲಾರಿಗಳನ್ನು ತಪಾಸಣೆ ನೆಪದಲ್ಲಿ ತಡೆದು ನಿಲ್ಲಿಸಿ ಲಂಚಕ್ಕಾಗಿ ಸತಾಯಿಸುತ್ತಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ತಲಪಾಡಿ ಆರ್‌ಟಿಒ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲಾರಿ ಚಾಲಕರಿಂದ ಲಂಚ ಪಡೆಯುತ್ತಿರುವ ಸಂಬಂಧ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸೋಮವಾರ ಎಸ್‌ಪಿ ಲಕ್ಷ್ಮಿ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿದೆ.
ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.
Next Story