ಕಾಫಿನಾಡಿನ ಕಾವೇರಿ, ಸಾಜಿದಾ ಬಾನುಗೆ 'ಫ್ಲಾರೆನ್ಸ್ ನೈಟಿಂಗೇಲ್' ಪ್ರಶಸ್ತಿ ಪ್ರದಾನ
ಚಿಕ್ಕಮಗಳೂರು, ನ.7: ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಪಿ.ಎಸ್.ಕಾವೇರಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಾಜಿದಾ ಬಾನು ಅವರು ಆರೋಗ್ಯ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ (Florence Nightingale) ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಪಿ.ಎಸ್.ಕಾವೇರಿಯವರು ಇತ್ತೀಚೆಗೆ ನಿವೃತ್ತರಾಗಿದ್ದು, ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಜಾವಳಿ ಹಾಗೂ ಚಿಕ್ಕಮಗಳೂರು ತಾಲೂಕು ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದರು. ಸಾಜಿದಾ ಬಾನು ಅವರು ಸದ್ಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಇವರ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಮಟ್ಟದ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿನೀಡಿ ಗೌರವಿಸಲಾಗಿದೆ.
Next Story