ಕೋಳಿ ಸಾಕಣೆಗೆ ಬಳಸುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು, ನ.7: ಕೋಳಿ ಸಾಕಾಣಿಕೆಗಾಗಿ ಉಪಯೋಗಿಸುವ ಕೃಷಿ ಭೂಮಿಯನ್ನು ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸರಕಾರ ಆದೇಶ ಹೊರಡಿಸಲಾಗಿದೆ.
ಕೃಷಿ ಜಮೀನನ್ನು ಇತರ ಉದ್ದೇಶಗಳಿಗೆ ಉಪಯೋಗಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 (2)ರಡಿ ಬೇಸಾಯದ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯನ್ನು ಅಥವಾ ಅದರ ಯಾವುದೇ ಭಾಗವನ್ನು ಯಾವುದೇ ಇತರ ಉದ್ದೇಶಕ್ಕಾಗಿ ಬದಲಿಸಲು ಇಚ್ಛಿಸಿದರೆ ಅನುಮತಿಗಾಗಿ ಜಿಲ್ಲಾಧಿಕಾರಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ ಕಲಂ 2-(ಎ)(1)(ಡಿ)ರಲ್ಲಿ ಕೋಳಿ ಸಾಕಣೆ (ಕೋಳಿ ಫಾರಂ)ಯನ್ನು "ಕೃಷಿ" ಎಂದು ವ್ಯಾಖ್ಯಾನಿಸಲಾಗಿರುವುದರಿಂದ ಕೋಳಿ ಸಾಕಾಣಿಕೆಗೆ ಬಳಕೆಯಾಗುವ ಜಮೀನಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರಡಿ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.
Next Story