ಪ್ರಾಥಮಿಕ-ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಮಂಗಳೂರು, ನ.8: ಸಚಿವರು, ಶಾಸಕರು, ಅಧಿಕಾರಿಗಳು, ಉದ್ಯಮಿಗಳು ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತರೆ ದೇಶ ಬಲಿಷ್ಠವಾಗದು. ಮೈದಾನಲ್ಲಿ ಆಟವಾಡುವ ವಿದ್ಯಾರ್ಥಿಗಳಿಂದ ದೇಶ ಬಲಿಷ್ಠವಾಗಲು ಸಾಧ್ಯ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ, ಉಳ್ಳಾಲ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧೀನದ ಹಳೆಕೋಟೆ ಸೈಯದ್ ಮದನಿ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಮಂಗಳಾ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹಾ, ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸದಾಶಿವ ಉಳ್ಳಾಲ, ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಎಚ್.ಆರ್., ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಇಬ್ರಾಹೀಂ ಯು.ಕೆ., ಕಾರ್ಯದರ್ಶಿ ಎ.ಕೆ.ಮೊಯ್ದಿನ್, ಲಯನ್ಸ್ ಕಾವೇರಿ ಅಧ್ಯಕ್ಷೆ ಅನುರಾಧಾ, ಜಿಪಂ ಮಾಜಿ ಅಧ್ಯಕ್ಷೆ ಮಮತಾ ಡಿ. ಗಟ್ಟಿ, ರಾಜ್ಯ ಪ್ರತಿನಿಧಿ ಸ್ಟ್ಯಾನಿ ತಾವ್ರೋ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಕಾರ್ಯದರ್ಶಿ ಅಲೋಶಿಯಸ್ ಡಿಸೋಜ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಶಂಕರ್, ಕೋಟೆಪುರ ಟಿಪ್ಪು ಸುಲ್ತಾನ್ ಪ್ರೌಢಶಾಲೆಯ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಚ್. ಮಲಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಅಲ್ತಾಫ್, ಕೋಶಾಧಿಕಾರಿ ಕರೀಂ, ಜಯವಂತಿ ಸೋನ್ಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಲಿಲ್ಲಿ ಪಾಯ್ಸ್, ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷೆ ಪ್ರಮೀಳಾ, ಮುಖ್ಯಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಜಯವಂತಿ ಸೋನ್ಸ್, ಕಾರ್ಯದರ್ಶಿ ಮೋಹನ್, ತ್ಯಾಗಂ ಹರೇಕಳ, ರಸೂಲ್ ಖಾನ್, ಇಮ್ತಿಯಾಝ್, ಸಿಆರ್ ಪಿಗಳಾದ ಹರೀಶ್ ಕುಮಾರ್, ರಹೆನಾ, ಕುಮುದಿನಿ, ಗೀತಾ ಶೆಟ್ಟಿ, ವಿಲ್ಮಾ ಡಿಸೋಜ, ನಳಿನಿ, ಅನಿತಾ, ನಿರ್ಮಲಾ ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯಶಿಕ್ಷಕ ಕೆಎಂಕೆ ಮಂಜನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿತ್ರಕಲಾ ಶಿಕ್ಷಕ ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.