Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

8 Nov 2022 5:34 PM IST
share
ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರು, ನ. 8: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಚಿತ್ರನಟ ಟಿ.ಎಸ್.ಲೋಹಿತಾಶ್ವ (80) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 

ತೀವ್ರ ಹೃದಯಾಘಾತದಿಂದ ಲೋಹಿತಾಶ್ವ ಅವರನ್ನು ಒಂದು ತಿಂಗಳ ಹಿಂದೆ ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸುಮಾರು ಒಂದು ತಿಂಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ನ.8ರ ಮಧ್ಯಾಹ್ನ ಕೊನೆಯುಸಿರೆಳೆದರು. ಮೃತರ ಅಂತ್ಯಕ್ರಿಯೆ ತುಮಕೂರು ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಬುಧವಾರ ನೆರವೇರಲಿದೆ. 

ಲೋಹಿತಾಶ್ವ ಅವರು ತುಮಕೂರಿನ ತೊಂಡಗೆರೆಯಲ್ಲಿ 1942ರ ಆ.5ರಂದು ಜನಿಸಿದ್ದರು. ತಂದೆ ಸಿದ್ಧವೀರಪ್ಪ-ತಾಯಿ ಭದ್ರಮ್ಮ ದಂಪತಿ ಪುತ್ರ. ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಚಲನಚಿತ್ರಗಳು, ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಲೋಹಿತಾಶ್ವ ಅವರು ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದು, ಅವುಗಳಲ್ಲಿ ಅಭಿಮನ್ಯು, ಎ.ಕೆ. 47, ದಾದಾ, ದೇವಾ, ಎಲ್ಲರಂಥಲ್ಲ ನನ್ನ ಗಂಡ, ಏಕಲವ್ಯ, ಹೊಸ ನೀರು, ಇಂದಿನ ರಾಮಾಯಣ, ಕಲಾವಿದ, ನೀ ಬರೆದ ಕಾದಂಬರಿ, ಒಂದು ಊರಿನ ಕಥೆ, ಪ್ರೀತಿ ವಾತ್ಸಲ್ಯ, ಸಾಂಗ್ಲಿಯಾನ, ಸಮಯದ ಗೊಂಬೆ, ಸಿಂಹಾಸನ ಮುಂತಾದವು. ಲೋಹಿತಾಶ್ವ ಚಿತ್ರರಂಗದಲ್ಲಿ ತಮ್ಮ ಗಂಭೀರ ಧ್ವನಿಗೆ ಹೆಸರಾದವರು. ಅವರ ಪುತ್ರ ನಟ ಶರತ್ ಲೋಹಿತಾಶ್ವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. 

ಲೋಹಿತಾಶ್ವ ಅವರು ಬರಗೂರು ರಾಮಚಂದ್ರಪ್ಪ ಅವರ ಚಿತ್ರಕ್ಕೆ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ನಂತರ ಪರಶುರಾಮ, ಸಮಯದ ಗೊಂಬೆ ಸಿನಿಮಾಗಳಲ್ಲಿ ಡಾ.ರಾಜ್‍ಕುಮಾರ್ ಅವರ ಜತೆ ಕಾಣಿಸಿಕೊಂಡಿದ್ದಾರೆ ಹಾಗೂ ಅಂಬರೀಶ್, ವಿಷ್ಣುವರ್ಧನ್, ಶಂಕರ್‍ನಾಗ್ ಜತೆ ಅತಿಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರು ಇತ್ತೀಚಿನ ವರ್ಷಗಳಲ್ಲಿ ಸಿನಿಮಾರಂಗದಿಂದ ದೂರ ಇದ್ದರು. 2018ರ ಬಳಿಕ ಲೋಹಿತಾಶ್ವ ಮತ್ತೆ ಬಣ್ಣ ಹಚ್ಚಿಲ್ಲ. ಹಿರಿಯ ನಟನ ಅಗಲಿಕೆಗೆ ಅನೇಕ ಸಿನಿಮಾ ಗಣ್ಯರು ಮತ್ತು ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ತಮ್ಮ ಕಂಚಿನ ಕಂಠ ಹಾಗೂ ಪ್ರಬುದ್ಧ ನಟನೆಯಿಂದ ಕನ್ನಡಿಗರ ಜನಮಾನಸದಲ್ಲಿ ಶಾಶ್ವತವಾಗಿ ಸ್ಥಾನ ಪಡೆದಿದ್ದ ಹಿರಿಯ ನಟ ಶ್ರೀ ಲೋಹಿತಾಶ್ವ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿಃ pic.twitter.com/AMjDaiYBl8

— Basavaraj S Bommai (@BSBommai) November 8, 2022
share
Next Story
X