Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದಿಂದ ಚುನಾವಣಾ ಬಾಂಡ್...

ಕೇಂದ್ರ ಸರಕಾರದಿಂದ ಚುನಾವಣಾ ಬಾಂಡ್ ಯೋಜನೆಗೆ ತಿದ್ದುಪಡಿ

ಗುಜರಾತ್, ಹಿಮಾಚಲ ಚುನಾವಣೆಗೆ ಮುನ್ನ ಹೊಸ ಬಾಂಡ್‌ಗಳ ಮಾರಾಟ

8 Nov 2022 11:56 PM IST
share
ಕೇಂದ್ರ ಸರಕಾರದಿಂದ ಚುನಾವಣಾ ಬಾಂಡ್ ಯೋಜನೆಗೆ ತಿದ್ದುಪಡಿ
ಗುಜರಾತ್, ಹಿಮಾಚಲ ಚುನಾವಣೆಗೆ ಮುನ್ನ ಹೊಸ ಬಾಂಡ್‌ಗಳ ಮಾರಾಟ

ಹೊಸದಿಲ್ಲಿ, ನ. 8: ಚುನಾವಣಾ ಬಾಂಡ್‌ಗಳ Electoral Bonds ಯೋಜನೆಗೆ ಕೇಂದ್ರ ಸರಕಾರ ಸೋಮವಾರ ತಿದ್ದುಪಡಿ ತಂದಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುವ ವರ್ಷಗಳಲ್ಲಿ 15 ಹೆಚ್ಚುವರಿ ದಿನಗಳ ಕಾಲ ಈ ಬಾಂಡ್‌ಗಳನ್ನು ಮಾರಾಟ ಮಾಡಲು ಪ್ರಸಕ್ತ ತಿದ್ದುಪಡಿಯು ಅವಕಾಶ ಮಾಡಿಕೊಡುತ್ತದೆ.

ತಿದ್ದುಪಡಿ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ, ಈ ತಿದ್ದುಪಡಿಯನ್ನು ಬಳಸಿಕೊಂಡ ಸರಕಾರವು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಳಿಗೆ ಮುಂಚಿತವಾಗಿ ನವೆಂಬರ್ 9ರಿಂದ 15ರವರೆಗೆ ಹೊಸದಾಗಿ ಚುನಾವಾಣಾ ಬಾಂಡ್‌ಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಚುನಾವಣಾ ಬಾಂಡ್‌ಗಳು ಹಣದ ಮೌಲ್ಯವನ್ನು ಹೊಂದಿದ್ದು, ನಾಗರಿಕರು ಅಥವಾ ಕಾರ್ಪೊರೇಟ್ ಕಂಪೆನಿಗಳು ಅವುಗಳನ್ನು ಬ್ಯಾಂಕೊಂದರಿಂದ ಖರೀದಿಸಿ ರಾಜಕೀಯ ಪಕ್ಷವೊಂದಕ್ಕೆ ದೇಣಿಗೆಯ ರೂಪದಲ್ಲಿ ನೀಡಬಹುದಾಗಿದೆ. ಬಳಿಕ ರಾಜಕೀಯ ಪಕ್ಷಗಳು ಆ ಬಾಂಡ್‌ಗಳನ್ನು ಬ್ಯಾಂಕ್‌ಗೆ ಹಿಂದಿರುಗಿಸಿ ಅವುಗಳನ್ನು ಹಣವಾಗಿ ಮಾರ್ಪಡಿಸಿಕೊಳ್ಳಬಹುದಾಗಿದೆ. ಕೇಂದ್ರ ಸರಕಾರವು ಮೊದಲ ಬಾರಿಗೆ ಚುನಾವಣಾ ಬಾಂಡ್‌ಗಳನ್ನು 2018 ಜನವರಿಯಲ್ಲಿ ಜಾರಿಗೆ ತಂದಿತ್ತು.

ಬಾಂಡ್‌ಗಳು ಜನವರಿ, ಎಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ತಲಾ 10 ದಿನಗಳ ಕಾಲ ಖರೀದಿಗೆ ಲಭ್ಯವಿರುತ್ತವೆ. ಲೋಕಸಭಾ ಚುನಾವಣೆಗಳು Assembly Election ನಡೆಯುವ ವರ್ಷಗಳಲ್ಲಿ ಹೆಚ್ಚುವರಿ 30 ದಿನಗಳ ಕಾಲ ಬಾಂಡ್‌ಗಳ ಮಾರಾಟಕ್ಕೆ ಅವಕಾಶವಿದೆ.

75% ದೇಣಿಗೆ ಬಿಜೆಪಿಗೆ!

2020-21ರ ಆರ್ಥಿಕ ವರ್ಷದಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಲಾಗಿರುವ ದೇಣಿಗೆಗಳ ಪೈಕಿ ಸುಮಾರು 75 ಶೇಕಡದಷ್ಟನ್ನು ಬಿಜೆಪಿ ಪಡೆದುಕೊಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮುಖ್ಯಾಂಶಗಳು

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುವ ವರ್ಷಗಳಲ್ಲಿ 15 ಹೆಚ್ಚುವರಿ ದಿನಗಳ ಕಾಲ ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ ಪ್ರಸಕ್ತ ತಿದ್ದುಪಡಿಯಿಂದ ಅವಕಾಶ.

ಈ ತಿದ್ದುಪಡಿಯನ್ನು ಬಳಸಿಕೊಂಡು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಳಿಗೆ ಮುಂಚಿತವಾಗಿ ನವೆಂಬರ್ 9ರಿಂದ 15ರವರೆಗೆ ಹೊಸದಾಗಿ ಚುನಾವಾಣಾ ಬಾಂಡ್‌ಗಳ ಮಾರಾಟ.

share
Next Story
X