ಬೆಂಗಳೂರು | ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ದೈಹಿಕ ಶಿಕ್ಷಕ ಸೆರೆ
ಬೆಂಗಳೂರು, ನ.9: ಸರಕಾರಿ ಶಾಲೆಯಲ್ಲಿ ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಸಂಬಂಧ ದೈಹಿಕ ಶಿಕ್ಷಕ ಓರ್ವನನ್ನು ಹೆಬ್ಬಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ.
ದೈಹಿಕ ಶಿಕ್ಷಕ ಆಂಜಿನಪ್ಪ (50) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯು ಶಾಲೆಯಲ್ಲಿ ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಹೆಬ್ಬಾಳ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
Next Story