ನ.11: ಬಂಟ್ವಾಳ ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ವಕ್ಫ್, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ

ಬಂಟ್ವಾಳ : ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ವಕ್ಫ್, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ನ.11 ರಂದು ಮಧ್ಯಾಹ್ನ 2.30ಕ್ಕೆ ಪಾಣೆಮಂಗಳೂರು ಆಲಡ್ಕದ ಎಸ್.ಎಸ್ ಹಾಲ್ ನಲ್ಲಿ ನಡೆಯಲಿದೆ.
ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅಧ್ಯಕ್ಷತೆ ವಹಿಸಲಿದ್ದು, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉದ್ಯಮಿ ಎಸ್.ಎಂ. ಮುಸ್ತಫಾ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ವಕ್ಫ್ ಅಧಿಕಾರಿ ಸಯ್ಯದ್ ಮಹಝಮ್, ಮಂಗಳಾ ಕಿಡ್ನಿ ಫೌಂಡೇಶನ್ ವೈದ್ಯರಾದ ಡಾ.ಮೊಯ್ದಿನ್ ನಫ್ಸೀರ್, ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಅವರು ವಕ್ಫ್, ಆರೋಗ್ಯ ಹಾಗೂ ಶಿಕ್ಷಣದ ಬಗ್ಗೆ ಮಾಹಿತಿ ನೀಡುವರು.
ಇದೇ ವೇಳೆ ಮಿಲಾದ್ ಪ್ರಯುಕ್ತ ಸಂಸ್ಥೆಯ ವತಿಯಿಂದ ನಡೆಸಲಾದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಸಂಯುಕ್ತ ಜಮಾಅತ್ ಪ್ರಕಟಣೆ ತಿಳಿಸಿದೆ.
Next Story