Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.12ರಂದು ದ.ಕ. ಜಿಲ್ಲಾ ಕಾಂಗ್ರೆಸ್...

ನ.12ರಂದು ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದಿಂದ ಜನಾಗ್ರಹ ಸಭೆ

10 Nov 2022 2:12 PM IST
share
ನ.12ರಂದು ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದಿಂದ ಜನಾಗ್ರಹ ಸಭೆ

ಮಂಗಳೂರು, ನ.10: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲಾಧ್ಯಕ್ಷ ಲಾರೆನ್ಸ್ ಡಿಸೋಜ, ಅಂದು ಅಪರಾಹ್ನ 3 ಗಂಟೆಗೆ ನಗರದ ಕೂಳೂರಿನ ಕೆಐಒಸಿಎಲ್ ಮುಂಭಾಗದಲ್ಲಿ ಈ ಜನಾಗ್ರಹ ಸಭೆ ನಡೆಯಲಿದೆ ಎಂದರು.

ಘಟಕದ ರಾಜ್ಯಾಧ್ಯಕ್ಷ ಪುಟ್ಟೆಸ್ವಾಮಿ ಗೌಡ, ಕೆಪಿಸಿಸಿ ಉಪಾಧ್ಯಕ್ಷ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ, ಮಾಜಿ ಸಚಿವ ಪ್ರಿಯಾಂಕ ಖರ್ಗೆ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ, ಕೈಗಾರಿಕಾ ವಿರೋಧಿ ನೀತಿಯಿಂದಾಗಿ ಕೈಗಾರಿಕೆಗಳು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಐಒಸಿಎಲ್‌ಗೆ ರ್ತುಗೆ ಶೇ.45 ಸುಂಕ ವಿಧಿಸಿರುವುದರ ಪರಿಣಾಮ ಕಳೆದ 5 ತಿಂಗಳುಗಳಿಂದ ಇಲ್ಲಿ ಉತ್ಪಾದನೆ ಸ್ಥಗಿತಗೊಂಡಿದ್ದು, ಸುಮಾರು 1,600 ಉದ್ಯೋಗಿಗಳು, ಇದನ್ನು ಅವಲಂಬಿತ 2,600ಕ್ಕೂ ಅಧಿಕ ಕುಟುಂಬಗಳ ಭವಿಷ್ಯ ಅತಂಕದಲ್ಲಿದೆ. ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಇಲ್ಲಿರುವ ಘಟಕಗಳು ಗೋದಾಮುಗಳಾಗಿ ಪರಿವರ್ತಿತವಾಗಿವೆ. ಪ್ರಮುಖ ಉದ್ದಿಮೆಯಾಗಿರುವ ಜೆಬಿಎಫ್ 2018ರಲ್ಲಿ ಉತ್ಪಾದನೆ ಆರಂಭಿಸಬೇಕಿತ್ತು. ಆದರೆ ಇನ್ನೂ ಕಾರ್ಯಾರಂಭಮಾಡಿಲ್ಲ. ಎಂಆರ್‌ಪಿಎಲ್‌ನ 5 ನೇ ಹಂತದ ವಿಸ್ತರಣೆಯಲ್ಲಿ ಭೂಸ್ವಾಧೀನ ಪ್ಯಾಕೇಜ್‌ನಲ್ಲಿ ನಿರ್ವಸಿತರಿಗೆ ಉದ್ಯೋಗ ನೀಡುವ ಅಂಶವನ್ನು ಕೈಬಿಡಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಗೆ ಹೊಸದಾಗಿ ಹೂಡಿಕೆಗಳು ಹರಿದುಬರುತ್ತಿಲ್ಲ. ರಾಜ್ಯ, ರಾಷ್ಟ್ರಮಟ್ಟದಲ್ಲಿ ಆಗುತ್ತಿರುವ ಹೂಡಿಕೆದಾರರ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ .ಇಲ್ಲಿ ಉನ್ನತ ಶಿಕ್ಷಣ ಪಡೆದು ಹೊರಬರುತ್ತಿರುವ ಯುವಜನತೆ ಉದ್ಯೋಗ ಅರಸಿ ಹೊರ ರಾಜ್ಯಗಳತ್ತ ತೆರಳುತ್ತಿದ್ದಾರೆ. ಈ ಎಲ್ಲಾ ಅಂಶಗಳ ಬಗ್ಗೆ ಜನಾಗ್ರಹ ಸಭೆಯ ಮೂಲಕ ಸರಕಾರದ ಗಮನ ಸೆಳೆಯಲಾಗುವುದು ಎಂದವರು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ಹುಸಿಯಾಗಿದೆ. ಪ್ರಸಕ್ತ ಉದ್ಯೋಗ ಸೃಷ್ಟಿಯ ಬದಲು ಉದ್ಯೋಗ ನಷ್ಟವಾಗುತ್ತಿದೆ ಎಂದರು.

ಕಾರ್ಮಿಕ ಕಲ್ಯಾಣ ನಿಧಿಯ ಪ್ರಯೋಜನ ಅಸಂಘಟಿತ ವಲಯದ ಕಾರ್ಮಿಕರಿಗೂ ಲಭಿಸುವಂತೆ ಇದಕ್ಕೆ ತಿದ್ದುಪಡಿ ತರಬೇಕು ಎಂದವರು ಆಗ್ರಹಿಸಿದರು.

ಮುಖಂಡರಾದ ಸಲೀಂ,ವಿಶ್ವಾಸ್‌ದಾಸ್ ಕುಮಾರ್, ಸುರೇಂದ್ರ ಕಂಬಳಿ, ನೀರಜ್ ಪಾಲ್,ಉಮೇಶ್ ದಂಡಕೇರಿ, ಕಾರ್ಪೋರೇಟರ್ ಅನಿಲ್ ಅನಿಲ್ ಕುಮಾರ್,ವಹಾಬ್ ಕುದ್ರೋಳಿ, ಜಯರಾಜ ಕೋಟ್ಯಾನ್, ಸುನೀಲ್, ನಜೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆ

ಕಾಂಗ್ರೆಸ್ ರಾಜ್ಯ ಕಾರ್ಮಿಕ ಘಟಕದ ರಾಜ್ಯಕಾರಣಿ ಸಭೆಯು ನ.12ರಂದು ಬೆಳಗ್ಗೆ 10:30ಕ್ಕೆ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರುಗಲಿರುವುದು. ರಾಜ್ಯ ಘಟಕದ ಕಾರ್ಯಕಾರಿಣಿ ಸಭೆ ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ನಡೆಯುತ್ತಿದ್ದು ಅದರಂತೆ ಈ ತಿಂಗಳ ಸಭೆ ದ.ಕ. ಜಿಲ್ಲೆಯಲ್ಲಿ ನಡೆಯುತ್ತಿದೆ. ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿ, ಕಾರ್ಮಿಕರಿಗೆ ಇರುವ ಸೌಲಭ್ಯಗಳ ಅನುಷ್ಠಾನದಲ್ಲಿ ವಿಳಂಬ ಮುಂತಾದವುಗಳ ಬಗ್ಗೆ ಮಾಹಿತಿ ಸಂಗ್ರಹ ಇದರ ಮುಖ್ಯ ಉದ್ದೇಶವಾಗಿದೆ ಎಂದು ಲಾರೆನ್ಸ್ ಡಿಸೋಜ ತಿಳಿಸಿದರು.

share
Next Story
X