Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 108 ಅಡಿ ಎತ್ತರದ ಪ್ರಗತಿ ಪ್ರತಿಮೆ...

108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆ: ಮುಖ್ಯಮಂತ್ರಿ ಬೊಮ್ಮಾಯಿ

10 Nov 2022 6:07 PM IST
share
108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ನ.10: ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಸಿದ್ಧತೆ ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರಾ. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ.  ಅಹಮದಾಬಾದ್‍ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿಯನ್ನು  ನಿರ್ಮಿಸಿದ ಖ್ಯಾತಿ ಅವರದ್ದು. ನಾಳೆ ಪ್ರಧಾನಿ ಅವರಿಗೆ  ಅಭಿನಂದನೆ ಸಲ್ಲಿಸಲಿದ್ದಾರೆ. ಅವರ  ಕೈಚಳಕದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿ ಹೇಳಿದರು.

ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ: ನಾಳೆ(ನ.11) ಪ್ರಧಾನಮಂತ್ರಿ ಬೆಳಗ್ಗೆ 9 ಗಂಟೆಗೆ ಎಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪ ನಮನ ಮಾಡಲಿದ್ದಾರೆ. ಜೊತೆಗೆ, ಪಕ್ಕದಲ್ಲಿಯೇ ಇರುವ ವಾಲ್ಮೀಕಿ ಮೂರ್ತಿಗೂ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದರು.

ನಂತರ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ ಹೈಸ್ಪೀಡ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಂಗಳೂರು-ಮೈಸೂರು-ಚೆನ್ನೈ ಕಡೆ ಪ್ರಯಾಣ ಮಾಡುವುದು, ಬೆಂಗಳೂರು-ಮೈಸೂರು ಪ್ರಯಾಣದ ಅವಧಿಯನ್ನು ಅತ್ಯಂತ ಕಡಿಮೆ ಸಮಯದಲ್ಲಿ ತಲುಪಬಹುದು. ಭಾರತದಲ್ಲಿ ಐದನೇ ರೈಲು ಹಾಗೂ ದಕ್ಷಣ ಭಾರತದಲ್ಲಿ ಮೊದಲ ಹೈಸ್ಪೀಡ್ ರೈಲನ್ನು ಉದ್ಘಾಟನೆ ಮಾಡುತ್ತಿರುವುದು ಆ ಭಾಗದ ಪ್ರಯಾಣಿಕರಿಗೆ ಹಾಗೂ ಆರ್ಥಿಕ ಬೆಳವಣಿಗೆಗೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಟರ್ಮಿನಲ್-2  ಉದ್ಘಾಟನೆ: ವಿಮಾನನಿಲ್ದಾಣದಲ್ಲಿ 25 ಲಕ್ಷ ಪ್ರಯಾಣಿಕರ ಸಾಮಥ್ರ್ಯವುಳ್ಳು 2ನೇ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಈಗಿರುವುದು 35 ಲಕ್ಷ ಸಾಮಥ್ರ್ಯವುಳ್ಳದ್ದು, ಇವೆರಡೂ ಸೇರಿದರೆ ದೇಶದ 2ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ನಂತರ ಪ್ರಗತಿ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಆರ್.ಅಶೋಕ್, ಸಿ.ಸಿ.ಪಾಟೀಲ್ ಹಾಗೂ ಮತ್ತಿತರರು ಹಾಜರಿದ್ದರು.

share
Next Story
X