ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆ: ಶುಕ್ರವಾರ ಹಲವೆಡೆ ರಸ್ತೆ ಸಂಚಾರ ಬಂದ್

ಬೆಂಗಳೂರು, ನ.10:ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ಶುಕ್ರವಾರ ಬೆಂಗಳೂರಿನ ಕೆಲರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಗುರುವಾರ ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಜಂಟಿ ಆಯುಕ್ತ ಬಿ.ಆರ್.ರವಿಕಾಂತೇಗೌಡ, ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಸೂಚಿಸಿರುವ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದರು.
ಮೊದಲು ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ, ಆನಂತರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್-2 ಉದ್ಘಾಟನೆ ಮತ್ತು ಕೆಂಪೇಗೌಡ ಪ್ರತಿಮೆಯ ಅನಾವರಣ ಮಾಡಲಿದ್ದಾರೆ.
ಈ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಹಾಗೂ ಪ್ರಧಾನ ಮಂತ್ರಿಗಳ ಸಂಚಾರ ಮತ್ತು ಭದ್ರತಾ ದೃಷ್ಟಿಯಿಂದ ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ಲೀನ್ಸ್ ರಸ್ತೆ, ಒಳ್ಳಾರಿ ರಸ್ತೆ, ಏರ್ ಪೊರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ, ಶೇಷಾದ್ರಿ, ರಸ್ತೆ, ಕೆ.ಜಿ ರಸ್ತೆ, ವಾಟಾಳ್ ನಾಗರಾಜ್ ರಸ್ತೆ, ಇಂಟರ್ ನ್ಯಾಷನಲ್ ಸಪೋರ್ಟ್‍ನ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಇರುವುದಿಲ್ಲ ಎಂದರು.
ಆದರೆ, ಮೈಸೂರು ಬ್ಯಾಂಕ್ ವೃತ್ತ, ಎಲ್‍ಆರ್‍ಡಿಐ ಜಂಕ್ಷನ್, ಟ್ರಿಲೈಟ್ ಜಂಕ್ಷನ್, ರೇಸ್‍ವ್ಯೂವ್ ಜಂಕ್ಷನ್,ಮಾರಮ್ಮ ವೃತ್ತ, ಭಾಷ್ಯಂ ವೃತ್ತ, ಕ್ಲೀನ್ ವೃತ್ತ, ಬಾಳೇಕುಂದ್ರಿ ಜಂಕ್ಷನ್, ಕೆಆರ್ ಪುರಂ-ಬಾಣಸವಾಡಿ, ಮಡಿವಾಳ-ವೈಟ್‍ಫೀಲ್ಡ್, ಬನಶಂಕರಿ- ಕೆಂಗೇರಿ-ಮಾಗಡಿ ರಸ್ತೆ, ತುಮಕೂರು ರಸ್ತೆ-ಪೀಣ್ಯ-ಯಶವಂತಪುರ, ಹೊಸುರು-ಆನೇಕಲ್-ಕನಕಪುರ-ರಾಮನಗರ-ಮಾಗಡಿ, ಜಯನಗರ-ಬಸವನಗುಡಿ, ಹಲಸೂರು, ಶಿವಾಜಿನಗರ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅವರು ಹೇಳಿದರು.
.jpg)







