ಪ್ರತಿಭಾ ಕುಳಾಯಿಗೆ ನಿಂದನೆ ಪ್ರಕರಣ: ಆರೋಪಿ ಶ್ಯಾಮ ಸುದರ್ಶನ್ ಭಟ್‌ಗೆ ಜಾಮೀನು

ಮಂಗಳೂರು: ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕಿ ಪ್ರತಿಭಾ ಕುಳಾಯಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣದ ಆರೋಪಿ ಪುತ್ತೂರಿನ ಕಹಳೆ ನ್ಯೂಸ್‌ನ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ್ದ ಆರೋಪದಲ್ಲಿ ಶ್ಯಾಮ್ ಸುದರ್ಶನ್ ಭಟ್ ಹೊಸಮೂಲೆ ಮತ್ತು ಕೆ.ಆರ್. ಶೆಟ್ಟಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ ಕೆ.ಆರ್.ಶೆಟ್ಟಿ ನ್ಯಾಯಾಲಯಕ್ಕೆ ಶರಣಾಗಿದ್ದ. ಆತ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ನ್ಯಾಯಾಂಗ ಬಂಧನ ವಿಧಿಸಿತ್ತು.
ಆರೋಪಿಯು ಜಾಮೀನು ಕೋರಿ ಅ.25ರಂದು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ.
Next Story