ಉಡುಪಿ: ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ, ಪುಸ್ತಕ ಓದುವ ಸ್ಪರ್ಧೆ

ಉಡುಪಿ : ನಗರ ಕೇಂದ್ರ ಗ್ರಂಥಾಲಯ ಉಡುಪಿ ಇದರ ವತಿಯಿಂದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾ ಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಮಕ್ಕಳ ಸಮುದಾಯ ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ ಮತ್ತು ಪುಸ್ತಕ ಓದುವ ಸ್ಪರ್ಧೆ ನಡೆಸಲಾಯಿತು.
ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿದರು. ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ಹಾಗೂ ಡಾ.ಜಿ.ಶಂಕರ ಪ್ರಥಮ ದರ್ಜೆ ಕಾಲೇಜಿನ ಡಾ.ನಿಕೇತನ ಉಪಸ್ಥಿತ ರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಸ್ವಾಗತಿಸಿ ಗ್ರಂಥಪಾಲಕಿ ಸಿ.ರಂಜಿತಾ ನಿರೂಪಿಸಿದರು.ಪ್ರಥಮ ದರ್ಜೆ ಸಹಾಯಕಿ ಪ್ರೇಮ ಎಂ. ವಂದಿಸಿದರು.
Next Story





