Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ.6ರಂದು ಬೆಂಗಳೂರಿನಲ್ಲಿ ‘ದಲಿತ...

ಡಿ.6ರಂದು ಬೆಂಗಳೂರಿನಲ್ಲಿ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ ಸಮಾವೇಶ

10 Nov 2022 10:18 PM IST
share
ಡಿ.6ರಂದು ಬೆಂಗಳೂರಿನಲ್ಲಿ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ ಸಮಾವೇಶ

ಬೆಂಗಳೂರು, ನ. 10: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣದಿನದ ಅಂಗವಾಗಿ ನಗರದ ನ್ಯಾಷನಲ್‍ ಕಾಲೇಜು ಮೈದಾನದಲ್ಲಿ ಡಿ.6ರಂದು ‘ದಲಿತ ಸಾಂಸ್ಕೃತಿಕ ಪ್ರತಿರೋಧ’ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ತಿಳಿಸಿದೆ.

ಗುರುವಾರ ಇಲ್ಲಿನ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್‍ಎಸ್‍ಎಸ್‍ ಹಾಗೂ ಬಿಜೆಪಿ ಪಕ್ಷವು ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುತ್ತಿದೆ. ಹಾಗಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ, ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳ ರಕ್ಷಣೆಗಾಗಿ ಸಮಾವೇಶವನ್ನು ಆಯೋಜನೆ ಮಾಡಲಾಗಿದೆಎಂದರು. 

ಸಮಾವೇಶದ ರೂಪು ರೇಷೆಗಳ ಕುರಿತು ಈಗಾಗಲೇ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲಾಗಿದೆ.ರಾಜ್ಯದಲ್ಲಿ ಬಿಜೆಪಿ ಪ್ರಭುತ್ವದ ವಿರುದ್ಧ ಬಹುದೊಡ್ಡ ರೂಪದಲ್ಲಿ ಪ್ರತಿರೋಧದ ಅಲೆ ಎದ್ದಿದೆ. ಈ ಸಮಾವೇಶವು ಇಡೀ ದಲಿತ ಚಳವಳಿಗೆ ಮರುಹುಟ್ಟು ಮತ್ತು ಹೊಸ ದಿಕ್ಕನ್ನು ತೋರಿಸುತ್ತದೆ. ರೈತ ಸಂಘ, ಕಾರ್ಮಿಕ ಸಂಘಗಳೂ ಸಮಾವೇಶಕ್ಕೆ ಬೆಂಬಲ ನೀಡಿವೆ ಎಂದರು.

ರಾಜ್ಯರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಶುರು ಮಾಡಿ, ಕೇಂದ್ರದ ಕೃಷಿ ವಿರೋಧಿ, ಕಾರ್ಮಿಕ ವಿರೋಧಿ ಕಾನೂನು ಮತ್ತು ನೀತಿಗಳ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಬೇಕಿದೆ. ಮುಂದೆ ರಾಜಕೀಯವಾಗಿಯೂ ಕೋಮುವಾದಿ ಶಕ್ತಿಗಳನ್ನು ಹೇಗೆ ಹಿಮ್ಮೆಟ್ಟಿಸಬೇಕು. ಹಾಗಾಗಿ ನಮ್ಮ ನಡುವಿನ ವೈರುದ್ಯಗಳನ್ನು ಮರೆತು ಅನಿವಾರ್ಯವಾಗಿ ಇಂದು ಒಗ್ಗಟ್ಟಾಗಬೇಕಿದೆ ಎಂದು ಕರೆ ನೀಡಿದರು.

ದಲಿತ ಮುಖಂಡ ಇಂದೂಧರ ಹೊನ್ನಾಪುರ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರದ ಆಡಳಿತದಲ್ಲಿ ಜನ ವಿರೋಧಿ ಕಾಯ್ದೆ ಮತ್ತು ನೀತಿಗಳನ್ನು ಜಾರಿಗೊಳಿಸಿ ಪ್ರಜಾಪ್ರಭುತ್ವ, ಸಂವಿಧಾನ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಹೊಸಕಿ ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ಎನ್.ವೆಂಕಟೇಶ್, ಡಾ.ಡಿ.ಜಿ.ಸಾಗರ್, ಎನ್.ಮುನಿಸ್ವಾಮಿ, ಮಾವಳ್ಳಿ ಶಂಕರ್, ಲಕ್ಷ್ಮೀನಾರಾಯಣ ನಾಗವಾರ, ಎಂ ಸೋಮಶೇಖರ್, ಗುರುಪ್ರಸಾದ್‍ಕೆರಗೋಡು ಮತ್ತಿತರರು ಉಪಸ್ಥಿತರಿದ್ದರು.

''ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸಂದರ್ಭದಲ್ಲೇ ದೇಶ ಎಲ್ಲ ರಂಗದಲ್ಲಿಯೂ ಅಧಃಪತನದತ್ತ ಸಾಗುತ್ತಿದೆ.ರಾಜ್ಯ ಸೇರಿ ಇಡೀ ದೇಶದಲ್ಲಿ ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ಜನರ ಭಾವನೆಗಳನ್ನು ಕೆರಳಿಸಲಾಗಿದೆ. ಕೇಂದ್ರ ಬಿಜೆಪಿ ಸರಕಾರವು ನೋಟುಗಳ ಅಮಾನ್ಯೀಕರಣ ಮಾಡಿದ ಬಳಿಕ ದೇಶದಲ್ಲಿ ಆರ್ಥಿಕತೆ ಏನಾಗಿದೆ ಎಂಬುದನ್ನು ಚರ್ಚೆ ಮಾಡಲು ಸಿದ್ಧವಿಲ್ಲ''

- ಮಾವಳ್ಳಿ ಶಂಕರ್, ದಲಿತ ಮುಖಂಡ

share
Next Story
X