ಶಿವಮೊಗ್ಗ | ಹುಲಿಕಲ್ ಘಾಟಿಯಲ್ಲಿ ಅಪಘಾತ; ಮಗು ಸೇರಿ ಇಬ್ಬರು ಸ್ಥಳದಲ್ಲೇ ಮೃತ್ಯು
ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ತಡರಾತ್ರಿ ವರದಿಯಾಗಿದೆ.
ಹುಲಿಕಲ್ ಲಕ್ಷ್ಮೀ ನರಸಿಂಹ ದೇವಸ್ಥಾನ ಸಮೀಪ ಅಪಘಾತ ಸಂಭವಿಸಿದ್ದು, ಮಾಸ್ತಿಕಟ್ಟೆಯ ಕಂಪನ ಕೈನ ರವಿ ಹಾಗೂ ಅವರ ಅಣ್ಣನ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೈಕ್ ಗೆ ಲಾರಿ ಢಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story