ಉಡುಪಿ | ರಸ್ತೆ ಅಪಘಾತ: ಇಬ್ಬರಿಗೆ ತೀವ್ರ ಗಾಯ

ಉಡುಪಿ: ಬಸ್ ಮತ್ತು ಗೂಡ್ಸ್ ಟೆಂಪೊ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ
ಕರಾವಳಿ ಬೈಪಾಸ್ ಕಡೆಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಬಸ್ ಶಿರಿಬೀಡು ಜಂಕ್ಷನ್ ಸಮೀಪ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ರಿಕ್ಷಾ ಢಿಕ್ಕಿ ಹೊಡೆಯಿತು.
ಇದರಿಂದ ರಿಕ್ಷಾ ಚಾಲಕ ಹಾಗೂ ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ .
Next Story