ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪಿಸಿದರೆ, ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: 'ಮೈಸೂರಿನಲ್ಲಿ ಟಿಪ್ಪು ಸುಲ್ತಾನರ (Tipu Sultan) 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು' ಎಂದು ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ.
ನಗರದ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಒಂದು ವೇಳೆ ಮೈಸೂರಿನಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ, ಬಾಬರಿ ಮಸೀದಿಯಂತೆ ಅದನ್ನು ಸಹ ಧ್ವಂಸ ಮಾಡಲಾಗುವುದು'' ಎಂದು ಹೇಳಿದರು.
''ಭಾರತ ಮತ್ತು ಪಾಕಿಸ್ತಾನ ಧರ್ಮದ ಆಧಾರದಲ್ಲಿ ಬೇರೆಯಾದ ರಾಷ್ಟ್ರಗಳು, ಪಾಕಿಸ್ತಾನ ಹೇಗೆ ಮುಸ್ಲಿಂರಿಗೆ ಸೀಮಿತವೋ, ಹಾಗೆ ಭಾರತ ಹಿಂದೂ ರಾಷ್ಟ್ರ. ಸಂವಿಧಾನದಲ್ಲಿ ಬಲವಂತವಾಗಿ ಜಾತ್ಯಾತೀತ ಶಬ್ಧ ಸೇರಿಸಲಾಗಿದೆ. ಇದನ್ನು ನಾವು ಒಪ್ಪುವುದಿಲ್ಲ'' ಎಂದು ಹೇಳಿದರು.
ಇದನ್ನೂ ಓದಿ: ಶತ್ರುಗಳ ಮುಂದೆ ಮಂಡಿಯೂರದ ಜಗತ್ತಿನ ಏಕೈಕ ನಾಯಕ ಟಿಪ್ಪು ಸುಲ್ತಾನ್: BJP ಎಂಎಲ್ಸಿ ಎಚ್.ವಿಶ್ವನಾಥ್
Next Story