Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ 17,08,955 ಮತದಾರರು:...

ದ.ಕ. ಜಿಲ್ಲೆಯಲ್ಲಿ 17,08,955 ಮತದಾರರು: ನಾಳೆಯಿಂದ ವಿಶೇಷ ನೋಂದಣಿ ಆರಂಭ

ಮಹಿಳೆಯರ ಸಂಖ್ಯೆಯೇ ಅಧಿಕ: ವಿಶೇಷ ನೋಂದಣಿ ನಾಳೆ ಚಾಲನೆ

11 Nov 2022 2:55 PM IST
share
ದ.ಕ. ಜಿಲ್ಲೆಯಲ್ಲಿ 17,08,955 ಮತದಾರರು: ನಾಳೆಯಿಂದ ವಿಶೇಷ ನೋಂದಣಿ ಆರಂಭ
ಮಹಿಳೆಯರ ಸಂಖ್ಯೆಯೇ ಅಧಿಕ: ವಿಶೇಷ ನೋಂದಣಿ ನಾಳೆ ಚಾಲನೆ

ಮಂಗಳೂರು, ನ. 11: ಮತದಾರರ ಪಟ್ಟಿ ಪರಿಷ್ಕರಣೆ 2023ರ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದೆ. ಇವರಲ್ಲಿ ಮಹಿಳೆಯರ ಸಂಖ್ಯೆ 8,71,364 ಆಗಿದ್ದು, ಪುರುಷ ಮತದಾರರು 8,37,527 ಎಂದು ದ.ಕ. ಜಿಲ್ಲಾಧಿಕಾರಿ ರವಿ ಎಂ.ಆರ್. ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಡಿಸೆಂಬರ್ 8ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ಹೇಳಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಹಿನ್ನೆಲೆಯಲ್ಲಿ ವಿಶೇಷ ನೋಂದಣಿ ಅಭಿಯಾನ ನ. 12, ನ. 20, ಡಿ. 3 ಮತ್ತು ಡಿ. 4ರಂದು ನಡೆಯಲಿದೆ. 2023ರ ಜನವರಿ 3ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
ದ.ಕ. ಜಿಲ್ಲಾ ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರವು 2,39,534 ಮತದಾರರೊಂದಿಗೆ ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಮಂಗಳೂರು (ಉಳ್ಳಾಲ) 1,92,315 ಮತದಾರರೊಂದಿಗೆ ಅತಿ ಕಡಿಮೆ ಮತದಾರನ್ನು ಹೊಂದಿರುವ ಕ್ಷೇತ್ರವಾಗಿದೆ. 2022ರ ಜನವರಿ 13ರಂದು ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿಯಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 17,53,328 ಮತದಾರರಿದ್ದರು. ಪರಿಷ್ಕರಣೆಯ ಸಂದರ್ಭ 73,782 ಮಂದಿಯ ಹೆಸರನ್ನು ತೆಗೆದು ಹಾಕಲಾಗಿದೆ. ಇದೇ ಅವಧಿಯವಲ್ಲಿ ಹೊಸತಾಗಿ 29410 ಹೊಸ ಮತದಾರರ ಸೇರ್ಪಡೆಯಾಗಿದೆ. ಹೀಗಾಗಿ ಈ ಹಿಂದಿನ ಅಂತಿಮ ಮತದಾರರ ಪಟ್ಟಿಗಿಂತ 44,373 ಮತದಾರರು ಕಡಿಮೆಯಾಗಿದ್ದಾರೆ. 2011ರ ಜನಗಣತಿ ಅನುಸಾರ ಜಿಲ್ಲೆಯಲ್ಲಿ ಲಿಂಗಾನುಪಾತ 1,020 ಇದ್ದು, ಪ್ರಸಕ್ತ ಮತದಾರರ ಪಟ್ಟಿಯ ಅನುಸಾರ ಲಿಂಗ ಅನುಪಾತ 1,040 ಆಗಿದೆ ಎಂದು ಅವರು ವಿವರಿಸಿದರು.

ಬೂತ್ ಮಟ್ಟದ ಏಜೆಂಟ್ ನೇಮಕಾತಿ
ಚುನಾವಣಾ ಆಯೋಗದ ನಿರ್ದೇಶನದಂತೆ ಮಾನ್ಯತೆ ಪಡೆದ ಮತ್ತು ನೋಂದಾಯಿತ ರಾಜಕೀಯ ಪಕ್ಷಗಳು ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವೆಲ್ ಏಜೆಂಟ್ (ಬಿಎಲ್‌ಎ) ನೇಮಕಾತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಸಹಕಾರ ನೀಡಲು ಕೋರಲಾಗಿದೆ. ಎಲ್ಲ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಹಾಗೂ ದೋಷ ರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕರಡು ಮತದಾರರ ಪಟ್ಟಿ ಪರಿಶೀಲನೆಗೆ ಸೂಚನೆ
ಈಗಾಗಲೇ ಪ್ರಕಟವಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ, ತೆಗೆದು ಹಾಕಿರುವ ಹೆಸರುಗಳು ಹಾಗೂ ಉಂಟಾಗಿರುವ ಇತರ ಬದಲಾವಣೆಗಳ ಬಗ್ಗೆ ಮತದಾರರು ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿಗೆ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು. ಅಥವಾ ವೆಬ್‌ಪೋರ್ಟಲ್ ceokarnataka.kar.nic.in, nvsp.in, dk.nic.in 
ಅಥವಾ ಜಿಲ್ಲಾ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ರವಿ ಎಂ.ಆರ್. ತಿಳಿಸಿದರು.

ಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು.

ಮತಗಟ್ಟೆ ಸಂಖ್ಯೆ 1860
ದ.ಕ. ಜಿಲ್ಲೆಯಲ್ಲಿ ಈ ಹಿಂದೆ ಒಟ್ಟು ಮತಗಟ್ಟೆಗಳ ಸಂಖ್ಯೆ 1861 ಆಗಿತ್ತು. ಕರಡು ಮತದಾರರ ಪಟ್ಟಿಯ ಅನುಸಾರ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆಗಳ ಸಂಖ್ಯೆ 1860ಕ್ಕೆ ಇಳಿಕೆಯಾಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿನ ಮತಗಟ್ಟೆ ಸಂಖ್ಯೆ 6ರಲ್ಲಿ 29 ಮತದಾರರಿದ್ದು, ಅದನ್ನು ಮತಗಟ್ಟೆ 5ಕ್ಕೆ ವಿಲೀನಗೊಳಿಸಲಾಗಿದೆ. ಪ್ರಸ್ತುತ ಮತಗಟ್ಟೆ ಸಂಖ್ಯೆ 5ರಲ್ಲಿ ಒಟ್ಟು 456 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ರವಿ ಎಂ.ಆರ್. ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ನಾಲ್ಕು ಅರ್ಹತಾ ದಿನಗಳು
ಈ ಹಿಂದೆ ಮತದಾರರ ಪಟ್ಟಿ ಸೇರ್ಪಡೆಗೆ ಪರಿಷ್ಕರಣೆ ಸಂದರ್ಭ ಜನವರಿ 1ರೊಳಗೆ ಒಂದು ಬಾರಿ 18 ವರ್ಷ ಪೂರ್ಣಗೊಳಿಸಿದವರನ್ನು ನೋಂದಾಯಿಸಲು ಅವಕಾಶವಿತ್ತು. ಇದೀಗ 17 ವರ್ಷ ದಾಟಿದ ಯುವಕರು ಮತದಾರರು ಒಂದು ವರ್ಷ ಮುಂಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಮೂರು ತಿಂಗಳಿಗೊಮ್ಮೆ ಅಂದರೆ ಜನವರಿ 1, ಎಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವಾಗಿರುತ್ತದೆ. ಈ ದಿನಾಂಕಗಳಂದು 18 ವರ್ಷಗಳನ್ನು ಪೂರ್ಣಗೊಳಿಸುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತದೆ. ಈ ಪ್ರಕಾರ 17 ವರ್ಷ ದಾಟಿದ ಅರ್ಜಿದಾರರು ನ. 9ರಿಂದ ನಮೂನೆ 6ರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರವಿ ಎಂ.ಆರ್. ತಿಳಿಸಿದರು.

share
Next Story
X