58 ವರ್ಷಕ್ಕೆ ನಿವೃತ್ತಿ ಹಿನ್ನೆಲೆ; ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್
ಬೆಂಗಳೂರು, ನ.11: ಎರಡು ವರ್ಷಗಳ ಮುನ್ನವೇ ನೌಕರರೊಬ್ಬರನ್ನು ಸೇವೆಯಿಂದ ನಿವೃತ್ತಿಗೊಳಿಸಲಾಗಿದೆ ಎಂದು ನೌಕರರೊಬ್ಬರು ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ(KSCA) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸರಕಾರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದ್ದರೂ ತಮ್ಮನ್ನು 58 ವರ್ಷಕ್ಕೆ ನಿವೃತ್ತಿ ಮಾಡಲಾಗಿದೆ ಎಂದು ಆಕ್ಷೇಪಿಸಿ ಕೆಎಸ್ಸಿಎ ನಿವೃತ್ತ ನೌಕರ ಜೆ.ರಾಜಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿವಾದಿಗಳಾದ ಕಾರ್ಮಿಕ ಇಲಾಖೆ ಹಾಗೂ ಕೆಎಸ್ಸಿಎಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
Next Story