ಮೂರು ದಶಕಗಳ ಬಳಿಕ ಜೈಲಿನಿಂದ ಬಿಡುಗಡೆಗೊಂಡ ರಾಜೀವ್ ಗಾಂಧಿ ಹಂತಕರು
![ಮೂರು ದಶಕಗಳ ಬಳಿಕ ಜೈಲಿನಿಂದ ಬಿಡುಗಡೆಗೊಂಡ ರಾಜೀವ್ ಗಾಂಧಿ ಹಂತಕರು ಮೂರು ದಶಕಗಳ ಬಳಿಕ ಜೈಲಿನಿಂದ ಬಿಡುಗಡೆಗೊಂಡ ರಾಜೀವ್ ಗಾಂಧಿ ಹಂತಕರು](https://www.varthabharati.in/sites/default/files/images/articles/2022/11/12/356141-1668257752.jpg)
ವೆಲ್ಲೂರು: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು 31 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸಲು ಆದೇಶಿಸಿದ್ದು, ಮೂರು ಆರೋಪಿಗಳನ್ನು ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಅದಕ್ಕೂ ಮೊದಲು ವೆಲ್ಲೂರು ಜೈಲಿಗೆ ಭೇಟಿಯಾಗಿ ಬೇಕಾದ ವಿಧಿ ವಿಧಾನಗಳನ್ನು ಪೂರ್ತಿಗೊಳಿಸಿದ್ದಾರೆ ಎಂದು ndtv ವರದಿ ಮಾಡಿದೆ.
ಪೆರೋಲ್ ಷರತ್ತುಗಳ ಭಾಗವಾಗಿ ತನ್ನ ಉಪಸ್ಥಿತಿಯನ್ನು ಗುರುತಿಸಲು ಆರೋಪಿಗಳಲ್ಲೊಬ್ಬರಾದ ನಳಿನಿ ಇಂದು ಬೆಳಿಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು.
ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು. ಅದೇ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕ್ಯಾಬಿನೆಟ್ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಅದಕ್ಕೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.
1991 ರ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ನಳಿನಿ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್ಪಿ ರವಿಚಂದ್ರನ್ ಜೈಲು ಪಾಲಾಗಿದ್ದರು.
ಅಪರಾಧಿಗಳು "ತೃಪ್ತಿದಾಯಕ ನಡವಳಿಕೆ" ತೋರಿಸಿದ್ದಾರೆ, ಶಿಕ್ಷೆ ಅವಧಿಯಲ್ಲಿ ಪದವಿಗಳನ್ನು ಪಡೆದರು, ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸಮಾಜ ಸೇವೆಯಲ್ಲಿ ಭಾಗವಹಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನಳಿನಿ ಶ್ರೀಹರನ್ ಅವರ ಸಹೋದರ ಬಾಕಿನಾಥನ್ ಮಾತನಾಡಿ, ಅಪರಾಧಿಗಳು ಈಗಾಗಲೇ ಮೂರು ದಶಕಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಮತ್ತು ಸಾಕಷ್ಟು ನೋವು ಅನುಭವಿಸಿದ್ದಾರೆ. ಮಾನವೀಯ ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರ ಬಿಡುಗಡೆಯನ್ನು ವಿರೋಧಿಸುವವರು ಭಾರತದ ಕಾನೂನನ್ನು ಗೌರವಿಸಬೇಕು" ಎಂದು ಎನ್ಡಿಟಿವಿಗೆ ತಿಳಿಸಿದ್ದಾರೆ.
ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ