Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ ಸರಕಾರದಿಂದ ಹಿಂದುಳಿದ ವರ್ಗಗಳ...

ಬಿಜೆಪಿ ಸರಕಾರದಿಂದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ: ಮಧು ಬಂಗಾರಪ್ಪ ಆರೋಪ

12 Nov 2022 7:26 PM IST
share
ಬಿಜೆಪಿ ಸರಕಾರದಿಂದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ: ಮಧು ಬಂಗಾರಪ್ಪ ಆರೋಪ

ಮಂಗಳೂರು: ರಾಜ್ಯ ಬಿಜೆಪಿ ಸರಕಾರವು ಹಿಂದುಳಿದ ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಹಿಂದುತ್ವದ ಅಜೆಂಡಾದ ಮೂಲಕ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸುವುದಾಗಿ ಹೇಳುವ ಬಿಜೆಪಿ ಸರಕಾರವು ಕನಿಷ್ಟ ಹಿಂದುಳಿದ ವರ್ಗಗಳ ದೇವಸ್ಥಾನಕ್ಕೂ ಅನುದಾನ ನೀಡಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಆರೋಪಿಸಿದ್ದಾರೆ.

ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಯೋಗ್ಯತೆ ಇಲ್ಲ. ಹಿಂದುಳಿದ ವರ್ಗಕ್ಕೆ ಒಂದು ಮನೆಯನ್ನು ನಿರ್ಮಿಸಿಕೊಟ್ಟಿಲ್ಲ. ಕನಿಷ್ಠ ಈ ಹಿಂದಿನ ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಮುಂದುವರಿಸಿದರೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗುತ್ತಿತ್ತು ಎಂದರು.

ಧರ್ಮ ಸಂಘರ್ಷವೇ ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ. ಹಾಗಾಗಿ ಜನರು ಕಾಂಗ್ರೆಸ್ ಸರಕಾರವನ್ನು ಬಯಸುತ್ತಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರೇ ನಾಯಕರು, ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿನಾ ಕಾರಣ ಶಾಂತಿ ಕದಡುವ ಬಿಜೆಪಿಯ ಕುತಂತ್ರ ಜನತೆಗೆ ಅರ್ಥವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕರಾವಳಿಯಲ್ಲೇ ಡಿಸೆಂಬರ್ ಅಥವಾ ಜನವರಿಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶ ಆರಂಭಿಸಲಿದೆ. ಬಳಿಕ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗುವುದು. ಈಗಾಗಲೇ ಹಿಂದುಳಿದ ವರ್ಗಗಳ ಘಟಕ ರಚಿಸಿ ಪದಾಧಿಕಾರಿಗಳ ನೇಮಕ ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ 2ಎ ವರ್ಗಕ್ಕೆ ಜಾತಿ ಸೇರ್ಪಡೆ ಕುರಿತು ಪ್ರಬಲ ಹೋರಾಟ ನಡೆಯುತ್ತಿದೆ. ಇದರಿಂದ ಹಿಂದುಳಿದ ವರ್ಗಕ್ಕೆ ಹಿನ್ನಡೆಯಾಗಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಒಬ್ಬರ ಸವಲತ್ತು ಕಿತ್ತುಕೊಂಡು ಮತ್ತೊಬ್ಬರಿಗೆ ನೀಡುವುದು ಸರಿಯಲ್ಲ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಯಾರಿಗೂ ತೊಂದರೆಯಾಗದಂತೆ ಮೀಸಲಾತಿ ಕೇಳಬೇಕು ಎಂದರು.

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಮಾತನಾಡಿ, ಯುಪಿಎ ಅಧಿಕಾರದಲ್ಲಿ ಕಾರ್ಖಾನೆಗಳನ್ನು ಮುಚ್ಚಲು ಕಾರ್ಮಿಕರ ಅನುಮತಿ ಪಡೆದೇ ಮುಂದಿನ ಹೆಜ್ಜೆ ಇಡಲಾಗುತ್ತಿತ್ತು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ಬಂಡವಾಳ ಶಾಹಿಗಳ, ದೊಡ್ಡ ಕಂಪನಿಗಳಿಗೆ ನೆರವಾಗಲು ಇತರೆ ಕೈಗಾರಿಕೆಗಳನ್ನು ಮುಚ್ಚಿಸುತ್ತಿದ್ದಾರೆ. ಇದರಿಂದ ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗುವಂತಾಗಿದೆ. ದೇಶದಲ್ಲಿ 18 ಲಕ್ಷ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ. 14 ಕೋಟಿ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರೆಲ್ಲರಿಗೆ ಪುನರ್ವಸತಿ ಕಲ್ಪಿಸಲು ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಪಕ್ಷದ ಮುಖಂಡರಾದ ಅಬ್ದುಲ್ ರಹ್ಮಾನ್, ಲಾರೆನ್ಸ್, ವಿಶ್ವಾಸ್‌ದಾಸ್ ಉಪಸ್ಥಿತರಿದ್ದರು.

share
Next Story
X