ಕೋಲಾರದಿಂದ ಸ್ಪರ್ಧೆ: ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ...
ಸಿದ್ದರಾಮಯ್ಯರಿಗೆ ಕೋಲಾರದಲ್ಲಿ ಅದ್ಧೂರಿ ಸ್ವಾಗತ, ಕೋಲಾರಮ್ಮ ದೇಗುಲಕ್ಕೆ ಭೇಟಿ
ಸಿದ್ದರಾಮಯ್ಯರಿಗೆ ಕೋಲಾರದಲ್ಲಿ ಅದ್ಧೂರಿ ಸ್ವಾಗತ, ಕೋಲಾರಮ್ಮ ದೇಗುಲಕ್ಕೆ ಭೇಟಿ
ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಡವಿದ್ದು, ನಾಮಪತ್ರ ಸಲ್ಲಿಸುವಾಗ ಮತ್ತೆ ಬರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರದಿಂದ ಸ್ವರ್ಧಿಸುವ ಬಗ್ಗೆ ಸಿದ್ದರಾಮಯ್ಯ ಅವರು ತಮ್ಮ ಒಲವು ತೋರಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ. ಅದಕ್ಕಾಗಿ ಕಾಂಗ್ರೆಸ್ ಅನ್ನು ಬೆಂಬಲಿಸಬೇಕಾಗಿದೆ ಎಂದರು.
ರವಿವಾರ ಕೋಲಾರ ಜಿಲ್ಲೆಗೆ ಭೇಟಿ ನೀಡಿರುವ ಸಿದ್ದರಾಮಯ್ಯ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಮಾಲಾರ್ಪಣೆ ಮಾಡಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಜೈಘೋಷ ಹಾಕಿದರು. ಬಳಿಕ ಕೋಲಾರ ನಗರದ ಶಕ್ತಿ ದೇವತೆ ಕೋಲಾರಮ್ಮ ದೇಗುಲಕ್ಕೆ ತೆರಳಿದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕ ನಂಜೇಗೌಡ, ಎಂಎಲ್ಸಿ ನಸೀರ್ ಅಹ್ಮದ್, ಅನಿಲ್ ಕುಮಾರ್ ಸೇರಿದಂತೆ ಕಾಂಗ್ರೇಸ್ ಮುಖಂಡರು ಕಾರ್ಯಕರ್ತರು ಹಾಜರಿದ್ದರು.