Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದುರಾಡಳಿತ ಮಿತಿಮೀರಿದರೆ ಮಹಿಳೆಯರು...

ದುರಾಡಳಿತ ಮಿತಿಮೀರಿದರೆ ಮಹಿಳೆಯರು ಸ್ಪೋಟಗೊಳ್ಳುತ್ತಾರೆ: ವೈದೇಹಿ

13 Nov 2022 6:16 PM IST
share
ದುರಾಡಳಿತ ಮಿತಿಮೀರಿದರೆ ಮಹಿಳೆಯರು ಸ್ಪೋಟಗೊಳ್ಳುತ್ತಾರೆ: ವೈದೇಹಿ

ಮಣಿಪಾಲ: ತಮ್ಮ ಮೇಲೆ ನಡೆಯುವ ದುರಾಡಳಿತದ ಬಗ್ಗೆ ಮಹಿಳೆಯರು ಮೌನವಿದ್ದರೂ ಒಂದು ಹಂತದ ನಂತರ ಸ್ಫೋಟಗೊಳ್ಳುತ್ತಾರೆ. ನನ್ನ ಸುತ್ತಲಿನ ಮಹಿಳೆಯರ ಜಗತ್ತು ಅವರ ವಿಧವಿಧದ ಬಳಲುವಿಕೆ ಪ್ರತಿಕ್ರಿಯಿ ಸಲು ಸಾಹಿತ್ಯವು ನನಗೆ ಅವಕಾಶ ನೀಡಿದೆ ಎಂದು ಲೇಖಕಿ ವೈದೇಹಿ ಹೇಳಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಲಾದ ‘ವೈದೇಹಿ ಜಗತ್ತು’ ಎರಡು ದಿನಗಳ ವಿಚಾರ ಸಂಕೀರ್ಣದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಪ್ರತಿಯೊಂದು ಭಾಷೆಯ ಸಾಹಿತ್ಯವು ಆ ಭಾಷೆಯೊಂದಿಗೆ ಬೆರೆತಿರುವ ಸಂಸ್ಕೃತಿಯ ಸೂಕ್ಷ್ಮತೆಗಳನ್ನು ಸೆರೆ ಹಿಡಿಯುತ್ತದೆ. ಆದುದರಿಂದ ಪ್ರತಿಯೊಂದು ಭಾಷೆಯ ಸಾಹಿತ್ಯವೂ ಉಳಿಯಬೇಕು. ಹಾಗೆಯೇ ಕನ್ನಡ ಸಾಹಿ ತ್ಯವೂ ಉಳಿಯಬೇಕು ಎಂದು ಅವರು ತಿಳಿಸಿದರು.

ಅಮ್ಮಚ್ಚಿಯೆಂಬ ನೆನಪು ಚಿತ್ರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೈದೇಹಿ, ಪುರುಷರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಮಹಿಳಾ ನಿರ್ದೇಶಕಿ ಸಿನಿಮಾ ಮಾಡು ವುದು ಸುಲಭವಲ್ಲ. ನಿರ್ದೇಶಕಿ ಚಂಪಾ ಶೆಟ್ಟಿ ಸಿನಿಮಾ ಮಾಡುವ ಯೋಚನೆ  ಬಗ್ಗೆ ಹೇಳಿದಾಗ ನಾನು ಒಪ್ಪಿಕೊಂಡೆ ಮತ್ತು ಅದು ಕೆಟ್ಟ ಚಿತ್ರವಾದರೂ ಸರಿ, ಸಿನಿಮಾ ಮಾಡು ಎಂದು ಹೇಳಿದ್ದೆ. ಕೊನೆಗೂ ಈ ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ ಮತ್ತು ನನಗೆ ತುಂಬಾ ಇಷ್ಟವಾಗಿದೆ ಎಂದರು.

ಈ ಮೊದಲು ವೈದೇಹಿ ಅವರ ಸಣ್ಣ ಕಥೆಗಳನ್ನು ಆಧರಿಸಿದ ’ಅಮ್ಮಚ್ಚಿಯೆಂಬ ನೆನಪು’ ಚಿತ್ರ ಪ್ರದರ್ಶನ ಗೊಂಡಿತು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನಿರ್ದೇಶಕಿ ಚಂಪಾ ಶೆಟ್ಟಿ, ಮೂಲ ಕಥೆಗೆ ನಿಷ್ಠರಾಗಿ ಉಳಿದು, ಚಿತ್ರದಲ್ಲಿ  ಕಥೆಗಳ ಸೂಕ್ಷ್ಮವನ್ನು ಹೊರತರುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದ ನಂತರ ತಾವು ಮಹಿಳೆಯರನ್ನು ನೋಡುವ ದೃಷ್ಟಿಕೋನವೇ ಬದಲಾಗಿದೆ ಎಂದು ಜನರು ನನಗೆ ಹೇಳಿದ್ದಾರೆ. ಅದೇ ಚಿತ್ರದ ಯಶಸ್ಸು ಎಂದರು. ಗೀತಾ ಸುರತ್ಕಲ್, ಪ್ರಕಾಶ್ ಶೆಟ್ಟಿ, ಡಾ.ರಾಧಾಕೃಷ್ಣ ಉರಾಳ್ ಮತ್ತಿತರರು ಚರ್ಚೆಯಲ್ಲಿದ್ದರು.

ವೈದೇಹಿ ಅವರ ಅಸ್ಪೃಷ್ಯರು ಕಾದಂಬರಿ ಕುರಿತು ಮಾತನಾಡಿದ ಪ್ರೊ.ಎನ್ ಮನು ಚಕ್ರವರ್ತಿ, ಕಾದಂಬರಿಯಲ್ಲಿ ದಲಿತ ಜಗತ್ತಿನ ಪ್ರಶ್ನೆಗಳ ಸಂಕೀರ್ಣ ಅನ್ವೇಷಣೆಯನ್ನು ಗಮನಿಸಬಹುದು. ಈ ಕಾದಂಬರಿಯನ್ನು ಶಿವರಾಮ ಕಾರಂತ ಅವರ ಚೋಮನ ದುಡಿ ಮತ್ತು ಅನಂತಮೂರ್ತಿ ಅವರ ಭಾರತೀಪುರ ದೊಂದಿಗೆ ನಿರ್ದಿಷ್ಟ ಸಮೀಕರಣ ಹೊಂದಿದೆ ಎಂದರು.

ಅಧ್ಯಕ್ಷತೆಯನ್ನು ಮಾಹೆ ಉಪಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ವಹಿಸಿ ದ್ದರು. ಬಿಹಾರ ಕೆಎಸ್‌ಡಿಎಸ್‌ಯು ಇದರ ಮಾಜಿ ಕುಲಪತಿ ಡಾ.ನೀಲಿಮಾ ಸಿನ್ಹಾ ಮಾತನಾಡಿದರು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮಾತನಾಡಿ ನಾವು ಜೇನ್ ಆಸ್ಟಿನ್ ಮತ್ತು ವರ್ಜೀನಿಯಾ ವೂಲ್ಫ್ ಅವರನ್ನು ಮಾತ್ರ ಅಧ್ಯಯನ ಮಾಡಿ, ವೈದೇಹಿ ಬಗ್ಗೆ ಅಧ್ಯಯನ ನಡೆಸದೆ ಹೋದರೆ ಅದು ಪ್ರಮಾದವೇ ಸರಿ ಎಂದರು.

ಸಾಹಿತ್ಯಕ್ಕೆ ವೈದೇಹಿ ಅವರು ನೀಡಿದ ಕೊಡುಗೆಯನ್ನು, ವಿಶೇಷವಾಗಿ ಡಾ. ಟಿ ಎಂ ಪೈ- ಸಾಹಿತ್ಯ ಪೀಠಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು. ಇದೇ ಸಂದರ್ಭದಲ್ಲಿ ವೈದೇಹಿ ಅವರನ್ನು ಸನ್ಮಾಸಲಾಯಿತು. ಜಿಸಿಪಿಎಎಸ್ ವಿದ್ಯಾರ್ಥಿ ಗಳಾದ ಸಾಗರ್, ಶ್ರವಣ್, ಸಂಪದಾ, ಮತ್ತು ವೆಲಿಕಾ ಕಾರ್ಯಕ್ರಮ ಸಂಯೋಜಿಸಿದರು.

share
Next Story
X