Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಪೊರೇಟ್ ಕಂಪೆನಿಗಳ ವಿರುದ್ಧ ಸಂಘಟಿತ...

ಕಾರ್ಪೊರೇಟ್ ಕಂಪೆನಿಗಳ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ಮೆಸೂರಿನ ಕಿಸಾನ್ ಸ್ವರಾಜ್ ಸಮ್ಮೇಳನದಲ್ಲಿ ಮೊಳಗಿದ ಘೋಷಣೆ

13 Nov 2022 11:46 PM IST
share
ಕಾರ್ಪೊರೇಟ್ ಕಂಪೆನಿಗಳ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ಮೆಸೂರಿನ ಕಿಸಾನ್ ಸ್ವರಾಜ್ ಸಮ್ಮೇಳನದಲ್ಲಿ ಮೊಳಗಿದ ಘೋಷಣೆ

ಮೈಸೂರು, ನ.13: ತಂತ್ರಜ್ಞಾನ, ಕೃಷಿ ಉತ್ಪಾದನೆ ಹೆಚ್ಚಳದ ನೆಪದಲ್ಲಿ ಸಾಂಪ್ರದಾಯಿಕ ಕೃಷಿ ಹಾಗೂ ಕೃಷಿಕರನ್ನು ಕಾರ್ಪೊರೇಟ್ ಕಂಪೆನಿಗಳ ಪಾಲು ಮಾಡುವುದನ್ನು ವಿರೋಧಿಸಿ ‘ಕಿಸಾನ್ ಸ್ವರಾಜ್ ಸಮ್ಮೇಳನ’ದಲ್ಲಿ ರೈತರು ಘೋಷಣೆ ಮೊಳಗಿಸಿದ್ದಾರೆ.

ಮುಕ್ತ ಗಂಗೋತ್ರಿಯಲ್ಲಿ ‘ಆಶಾ (ಅಲಯನ್ಸ್ ಫಾರ್ ಸಸ್ಟೈನಬಲ್ ಆ್ಯಂಡ್ ಹೊಲಿಸ್ಟಿಕ್ ಅಗ್ರಿಕಲ್ಚರ್) ಕಿಸಾನ್ ಸ್ವರಾಜ್ ಒಕ್ಕೂಟ’ ರವಿವಾರ ಆಯೋಜಿಸಿದ್ದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದೇಶದ ವಿವಿಧೆಡೆಯಿಂದ ಬಂದಿದ್ದ ಸಾವಿರಕ್ಕೂ ಹೆಚ್ಚು ರೈತರು ದನಿಗೂಡಿಸಿದರು.

ರೈತ ಮಹಿಳೆಯರ ಹಕ್ಕುಗಳ ಹೋರಾಟಗಾರ್ತಿ ಆಶ್ಲೇಶಾ ಖಾದ್ಸೆ ಹಾಗೂ ಸಂಜೀವ್ ಕುಲಕರ್ಣಿ ಘೋಷಣೆಗಳನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಅನಿಲ್ ಹೆಗ್ಡೆ, ಆಶಾ ಒಕ್ಕೂಟದ ಶ್ರೀಧರ್ ರಾಧಾಕೃಷ್ಣನ್, ಸಂಘಟಕರಾದ ಉಷಾ ಸೂಲಪಾಣಿ, ಕಾರ್ತಿಕ್ ಗುಣಶೇಖರ್, ರಾಷ್ಟ್ರೀಯ ಸಂಚಾಲಕ ಕಪಿಲ್ ಶಾ, ಕೆಎಸ್‌ಒಯು ಕುಲಸಚಿವ ಖಾದರ್ ಪಾಷಾ ಇದ್ದರು.

ರೈತರ ನಿರ್ಣಯಗಳು: ರೈತರ ರೈತರ ಭೂಮಿ, ಬೀಜ, ಮಾರುಕಟ್ಟೆ ಅಸ್ಥಿರಗೊಳಿಸಲು ಕಾರ್ಪೊರೇಟ್ ಕಂಪೆನಿಗಳು ಸರಕಾರದ ನೀತಿಗಳ ಮೇಲೆ ಪ್ರಭಾವ ಬೀರುತ್ತಿದ್ದು, ಅದರ ವಿರುದ್ಧ ಸಂಘಟಿತರಾಗಿ ಹೋರಾಡಬೇಕು. ಎಲ್ಲರನ್ನೂ ಒಳಗೊಳ್ಳುವ ಪರಿಸರಾತ್ಮಕ ಕೃಷಿ ಪದ್ಧತಿಯನ್ನೇ ಅನುಸರಿಸಬೇಕು. ಅದನ್ನು ಬೆಂಬಲಿಸುವ ತಂತ್ರಜ್ಞಾನಗಳನ್ನಷ್ಟೆ ಒಪ್ಪಬೇಕು.ರೈತರ ಸ್ವಾತಂತ್ರ, ಸ್ವಾಭಿಮಾನ ಮತ್ತು ಸಾರ್ವಭೌಮ ಹೆಚ್ಚಿಸಬೇಕು.

ನೀತಿ ಜಾರಿಗೆ ಮುನ್ನ ರೈತರ ಒಪ್ಪಿಗೆ ಪಡೆಯಬೇಕು. ರೈತ ಮಹಿಳೆಯರಿಗೆ ಭೂಮಿ ಹಕ್ಕು ವಿಷಯದಲ್ಲಿ ಕಾನೂನಾತ್ಮಕ ಬೆಂಬಲ ನೀಡಬೇಕು. ನಿಜವಾದ ಕೃಷಿಕರು ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ಭೂಮಿ ಸಿಗಬೇಕು. ಅನ್ಯ ಉದ್ದೇಶಕ್ಕೆ ಮಾರಾಟ ತಪ್ಪಿಸಬೇಕು.

ಕನಿಷ್ಠ ಬೆಂಬಲ ಬೆಲೆ, ಯೋಗ್ಯ ಪರಿಹಾರ, ವಿಮೆ ನೀಡಬೇಕು. ರೈತರ ಆತ್ಮಹತ್ಯೆ ತಡೆಯಬೇಕು. ಬೀಜಗಳ ಹಕ್ಕುಸ್ವಾಮ್ಯ ಕಂಪೆನಿಗಳ ಪಾಲಾಗಬಾರದು.

ಕೃಷಿ ವೈವಿಧ್ಯ ಉಳಿಸಿಕೊಳ್ಳಬೇಕು. ಸುರಕ್ಷಿತ, ವೈವಿಧ್ಯಮಯ, ಸಮಗ್ರ ಆಹಾರವು ಪ್ರತಿಯೊಬ್ಬ ನಾಗರಿಕರಿಗೂ ಸಿಗಬೇಕು. ಏನನ್ನು ತಿನ್ನಬೇಕು, ತಿನ್ನಬಾರದೆಂದು ನಿರ್ಧರಿಸುವುದೂ ಸಂವಿಧಾನಕ್ಕೆ ವಿರುದ್ಧ. ಜೀವ ವೈವಿಧ್ಯವನ್ನು ಉಳಿಸಿಕೊಳ್ಳಲು ಕುಲಾಂತರಿ ಸಾಸಿವೆ ಸೇರಿದಂತೆ ಯಾವುದೇ ಹೈಬ್ರೀಡ್ ತಳಿಗೆ ಅವಕಾಶ ನೀಡಬಾರದು. ಸ್ಥಳೀಯ ಸುಸ್ಥಿರ ಕೃಷಿ ಪ್ರೋತ್ಸಾ ಹಿಸಬೇಕು. ನಗರ ಹಾಗೂ ಗ್ರಾಮೀಣರ ನಡುವೆ ಸಂಬಂಧ ಬಲಪಡಿಸಬೇಕು ಎಂದು ರೈತರು ಸಮಾವೇಶದಲ್ಲಿ ನಿರ್ಣಯ ಮಂಡಿಸಿದರು.

share
Next Story
X