ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನ ವಿಚಾರ: ಎಚ್.ಡಿ ದೇವೇಗೌಡ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು, ನ. 14; ದೇವನಹಳ್ಳಿ ಏರ್ಪೋರ್ಟ್ ಬಳಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎಂಬ ಜೆಡಿಎಸ್ ಆರೋಪ ಭಾರೀ ಚರ್ಚೆಗೆ ಕಾರಣವಾಗಿದೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಈ ಬಗ್ಗೆ ನಾನು ಏನು ಮಾತನಾಡೋದಿಲ್ಲ. ಯಾರು ಏನೇನು ಮಾಡಿದರು ಎಂದು ವಿಶ್ಲೇಷಣೆ ಮಾಡುವುದಿಲ್ಲ'' ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಆರೋಪ ಏನು?: ''ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್.ಡಿ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ'' ಎಂದು ಜೆಡಿಎಸ್ ಟ್ವೀಟ್ ಮೂಲಕ ಹೇಳಿಕೆ ನೀಡಿತ್ತು.
ಇದನ್ನೂ ಓದಿ>>> ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು...: ಸಿಎಂ ಬೊಮ್ಮಾಯಿ ಹೇಳಿದ್ದೇನು?