ಮಂಗಳೂರು: ಬಸ್‌ಗಳ ಮಧ್ಯೆ ಅಪಘಾತ

ಮಂಗಳೂರು : ನಗರದ ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸೋಮವಾರ ಬೆಳಗ್ಗೆ ಎರಡು ಖಾಸಗಿ ಬಸ್‌ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಲೈಟ್‌ಹೌಸ್ ಹಿಲ್ ರಸ್ತೆಯಿಂದ ಮೂಡುಶೆಡ್ಡೆ ಕಡೆಗೆ ಚಲಿಸುತ್ತಿದ್ದ ಬಸ್‌ಗೆ ಬಂಟ್ಸ್ ಹಾಸ್ಟೆಲ್ ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂಧ ಬಸ್ಸೊಂದ ಮುಂಭಾಗ ಮತ್ತು ಇನ್ನೊಂದು ಬಸ್ಸಿನ ಎಡಭಾಗ ಜಖಂಗೊಂಡಿದೆ. ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಸಂಚಾರ ಪೂರ್ವ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Next Story