ಹಿರಾ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಳ್ಳಾಲ : ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯ ಹಿರಾ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಭಾ ಕಾರ್ಯಕ್ರಮವನ್ನು ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆಯ ದ.ಕ.ಜಿಲ್ಲಾಧ್ಯಕ್ಷ ಇಸ್ಮಾಯೀಲ್ ಶಾಫಿ ಬಬ್ಬುಕಟ್ಟೆ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಬ್ದುಲ್ ಕರೀಂ, ಅಬ್ದುಲ್ ರಹಿಮಾನ್, ಟ್ರಸ್ಟಿ ಯು.ಎ.ಅಬ್ದುಲ್ ಖಾದರ್, ಪಿಟಿಎ ಕೋಶಾಧಿಕಾರಿ ಶರೀಫ್ ಬಜ್ಪೆ ಉಪಸ್ಥಿತರಿದ್ದರು. ಲತೀಫ್ ಕಿರಾಅತ್ ಪಠಿಸಿದರು. ಗುಲ್ಶಾನ್ ಸ್ವಾಗತಿಸಿದರು. ಉಮರ್ ಗೀತೆ ಹಾಡಿದರು. ಆರಿಫ ಬಹುಮಾನ ವಿತರಿಸಿದರು. ರೀನಾ ವಂದಿಸಿದರು.
Next Story