Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆಗಳಿಗೆ ಕೇಸರಿ ಬಣ್ಣ ವಿವಾದ: 'ಸಿಎಂ...

ಶಾಲೆಗಳಿಗೆ ಕೇಸರಿ ಬಣ್ಣ ವಿವಾದ: 'ಸಿಎಂ ಅಂಕಲ್' ಅಭಿಯಾನ ಆರಂಭಿಸಿದ ಕಾಂಗ್ರೆಸ್, ಬೊಮ್ಮಾಯಿಗೆ ಪ್ರಶ್ನೆಗಳ ಸುರಿಮಳೆ

14 Nov 2022 9:58 PM IST
share
ಶಾಲೆಗಳಿಗೆ ಕೇಸರಿ ಬಣ್ಣ ವಿವಾದ: ಸಿಎಂ ಅಂಕಲ್ ಅಭಿಯಾನ ಆರಂಭಿಸಿದ ಕಾಂಗ್ರೆಸ್, ಬೊಮ್ಮಾಯಿಗೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ಶಾಲೆಗಳಿಗೆ ಕೇಸರಿ ಬಣ್ಣ  ಬಳಿಯುವ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ  ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ  ಕಾಂಗ್ರೆಸ್ 'ಸಿಎಂ ಅಂಕಲ್' ಎಂಬ ಅಭಿಯಾನ ಆರಂಭಿಸಿದೆ. 

#ಸಿಎಂಅಂಕಲ್ ಹ್ಯಾಷ್ ಟ್ಯಾಗ್ ಬಳಸಿ, ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, 'ಶಾಲೆಗಳಿಗೆ  ಕೇಸರಿ ಬಣ್ಣಕ್ಕಿಂತ ಮೂಲ ಸೌಕರ್ಯ ಒದಗಿಸಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. 

ಕಾಂಗ್ರೆಸ್ ನ ಸರಣಿ ಟ್ವೀಟ್ ಗಳು ಇಂತಿವೆ... 

''ರಾಜ್ಯಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ, ಶೌಚಾಲಯವಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ. #ಸಿಎಂಅಂಕಲ್, ಕೇಸರಿ ಬಣ್ಣ ಬಳಿಯುವಿರಂತೆ, ಆದರೆ ಮೊದಲು ಶೌಚಾಲಯ ಕಟ್ಟಿಸಿಕೊಡಿ. ಕುಡಿಯಲು ಶುಚಿಯಾದ ನೀರು ಕೊಡಿ, ಶಾಲೆಗಳು ಮಕ್ಕಳನ್ನು ಆಕರ್ಷಿಸುವಂತೆ ಮಾಡಿಕೊಡಿ'' 

''ಶಾಲೆಗಳಿಗೆ ಕೇಸರಿ ಬಣ್ಣ ಬಳಿಯಲು ವಿವೇಕಾನಂದರ ನೆಪ ಹೇಳುವ ಸರ್ಕಾರ ವಿವೇಕಾನಂದರ ನೈಜ ತತ್ವಗಳನ್ನು ಜಾರಿಗೊಳಿಸಲು ಮುಂದಾಗುತ್ತಿಲ್ಲವೇಕೆ? ಜೇಮ್‌ಶೇಟ್ ಜಿ ಟಾಟಾ ಅವರ ಮೂಲಕ ಭಾರತದ ಕೈಗಾರಿಕೆ & ವೈಜ್ಞಾನಿಕ ಕ್ರಾಂತಿಗೆ ವಿವೇಕಾನಂದರು ಕಾರಣರಾಗಿದ್ದರು. #ಸಿಎಂಅಂಕಲ್ ಮಕ್ಕಳಲ್ಲಿ ವೈಜ್ಞಾನಿಕ ಮನಭಾವ ಮೂಡಿಸುವಲ್ಲಿ ತಾವು ಕೆಲಸ ಮಾಡ್ತಿಲ್ಲವೇಕೆ?''

''ಕೋವಿಡ್ ನಂತರ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದಾರೆ. ಬಾಲಕಾರ್ಮಿಕರ ಸಂಖ್ಯೆ ಏರಿಕೆಯಾಗಿದೆ, ಬಾಲ್ಯವಿವಾಹವೂ ಏರಿಕೆಯಾಗಿದೆ. #ಸಿಎಂಅಂಕಲ್, ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಯೋಜನೆ ರೂಪಿಸುವುದನ್ನು ಬಿಟ್ಟು ಬಣ್ಣ ಬಣ್ಣ ಬಳಿಯುವ ಬಣ್ಣ ಬಣ್ಣದ ಮಾತಾಡಿಕೊಂಡು ಕುಳಿತಿರುವುದೇಕೆ?''

''ಸೈಕಲ್‌ಗಳಲ್ಲೂ ಹಗರಣ ನಡೆಸಿ ಕಳಪೆ ಸೈಕಲ್ ವಿತರಿಸಿದರೂ ಸರ್ಕಾರದ ಸೈಕಲ್‌ಗಳಿಂದ ಶಾಲಾ ಮಕ್ಕಳಿಗೆ ಅನುಕೂಲವಿತ್ತು. ಈಗ ಸೈಕಲ್ ಕೊಡುವುದನ್ನೇ ನಿಲ್ಲಿಸಿದ್ದೇಕೆ #ಸಿಎಂಅಂಕಲ್? ದೂರದಿಂದ ಸಮಯಕ್ಕೆ ಸರಿಯಾಗಿ ಶಾಲೆ ತಲುಪುವುದು ಹೇಗೆ? ಹಲವು ಸವಾಲುಗಳನ್ನು ಮುಂದಿಟ್ಟರೆ ಮಕ್ಕಳು ಶಿಕ್ಷಣದತ್ತ ಆಕರ್ಷಿತರಾಗುವುದು ಹೇಗೆ?''

''ಕೊರೋನಾ ನಂತರದ ಶೈಕ್ಷಣಿಕ ಬಿಕ್ಕಟ್ಟುಗಳನ್ನು ಗಮನಿಸುವುದನ್ನು ಬಿಟ್ಟು ಪಠ್ಯಪುಸ್ತಕದಲ್ಲಿ ಅವಾಂತರ ಸೃಷ್ಟಿಸಿತ್ತು ಸರ್ಕಾರ. ಶಾಲೆ ಶುರುವಾಗಿ ಅರ್ಧ ವರ್ಷ ಕಳೆದರೂ ಪಠ್ಯಪುಸ್ತಕದ ಗೊಂದಲ ಬಗೆಹರಿಸಲಿಲ್ಲ, ಮಕ್ಕಳಿಗೆ ಪಠ್ಯಪುಸ್ತಕ ನೀಡಲಿಲ್ಲ. #ಸಿಎಂಅಂಕಲ್ ಮಕ್ಕಳು ಏನನ್ನ ಓದಬೇಕು, ಪರೀಕ್ಷೆಗೆ ಹೇಗೆ ಸಜ್ಜಾಗಬೇಕು? ನೀವು ಪುಸ್ತಕ ಕೊಡುವುದೆಂದು?'' 

''ಶಾಲೆ ಶುರುವಾಗಿ ಅರ್ಧ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ವಿದ್ಯಾರ್ಥಿಗಳಿಗೆ ಸಂಪೂರ್ಣ ಸಮವಸ್ತ್ರ ಪೂರೈಕೆಯಾಗಿಲ್ಲ. ಮಕ್ಕಳು ಎರಡು ವರ್ಷ ಹಳೆಯದಾದ ಹರಿದುಹೋದ ಸಮವಸ್ತ್ರ ಹಾಕಿಕೊಂಡು ಬರ್ತಿದ್ದಾರೆ, ಮಕ್ಕಳಿಗೆ ಸಮವಸ್ತ್ರ ನೀಡುವಲ್ಲೂ ವಿಳಂಬವೇಕೆ, ಸಮವಸ್ತ್ರ ನೀಡುವುದು ಯಾವಾಗ?'' ಎಂದು ಕಾಂಗ್ರೆಸ್ ಮುಖ್ಯಮಂತ್ರಿ ಅವರನ್ನು ಪ್ರಶ್ನೆ ಮಾಡಿದೆ. 

ಶಾಲೆ ಶುರುವಾಗಿ ಅರ್ಧ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ವಿದ್ಯಾರ್ಥಿಗಳಿಗೆ ಸಂಪೂರ್ಣ ಸಮವಸ್ತ್ರ ಪೂರೈಕೆಯಾಗಿಲ್ಲ.

ಮಕ್ಕಳು ಎರಡು ವರ್ಷ ಹಳೆಯದಾದ ಹರಿದುಹೋದ ಸಮವಸ್ತ್ರ ಹಾಕಿಕೊಂಡು ಬರ್ತಿದ್ದಾರೆ, ಮಕ್ಕಳಿಗೆ ಸಮವಸ್ತ್ರ ನೀಡುವಲ್ಲೂ ವಿಳಂಬವೇಕೆ, ಸಮವಸ್ತ್ರ ನೀಡುವುದು ಯಾವಾಗ#ಸಿಎಂಅಂಕಲ್ ? pic.twitter.com/5aKSSIQU48

— Karnataka Congress (@INCKarnataka) November 14, 2022

ಬಡ ಮಕ್ಕಳ ಶಿಕ್ಷಣಕ್ಕೆ ಬಡತನ, ಹಸಿವು ಅಡ್ಡಿಯಾಗಬಾರದು ಎಂಬ ದೃಷ್ಟಿಯಲ್ಲಿ ಜಾರಿಗೆ ತಂದ ಬಿಸಿಯೂಟ ಯೋಜನೆಗೆ ಅನುದಾನ ನೀಡದೆ ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಸರ್ಕಾರ.

ಒಳ್ಳೆಯ ಪಾಠವೂ ಇಲ್ಲ, ಬಿಸಿ ಊಟವೂ ಇಲ್ಲ,
ಊಟ, ಪಾಠದ ಸಮಸ್ಯೆ ಬಗೆಹರಿಸಲು ಯಾವ ಕ್ರಮ ಕೈಗೊಳ್ಳುವಿರಿ #ಸಿಎಂಅಂಕಲ್ pic.twitter.com/eSWTa0OGrg

— Karnataka Congress (@INCKarnataka) November 14, 2022

ಅಪೌಷ್ಟಿಕತೆಯ ನಿವಾರಣೆಗಾಗಿ ಶಾಲೆ ಮಕ್ಕಳಿಗೆ ಮೊಟ್ಟೆ ವಿತರಣೆಯ ಯೋಜನೆಗೆ ಗ್ರಹಣ ಹಿಡಿಸಿದೆ ಸರ್ಕಾರ.#ಸಿಎಂಅಂಕಲ್
ಸಮರ್ಪಕವಾಗಿ ಮೊಟ್ಟೆ ವಿತರಣೆಗೆ ಕ್ರಮ ಕೈಗೊಳ್ಳಿ, ಅನುದಾನ ಬಿಡುಗಡೆ ಮಾಡಿ, ಮೊಟ್ಟೆಯಲ್ಲೂ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ. pic.twitter.com/69okTd6NFA

— Karnataka Congress (@INCKarnataka) November 14, 2022
share
Next Story
X